ಶನಿವಾರ, ಮೇ 15, 2021
25 °C

ಕೊಲೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ನಿಂಬೇಕಾಯಿಪುರದ ಮುನಿರಾಜು (26) ಹಾಗೂ ಕಾಟಂನಲ್ಲೂರು ಗ್ರಾಮದ ಆರ್.ಅಶೋಕ್ (25) ಬಂಧಿತ ಆರೋಪಿಗಳು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಿಂಬೇಕಾಯಿಪುರದ  ಗಾರೆ ಕೆಲಸ ಮಾಡುತ್ತಿದ್ದ ರಾಜಣ್ಣ (35) ಎಂಬಾತನಿಗೆ ಮದ್ಯಪಾನ ಮಾಡಿಸಿ ನಂತರ ಗ್ರಾಮದ ಬಳಿಯ ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.ಪೊಲೀಸರು ಮೊದಲು ಅಸ್ವಾಭಾವಿಕ ಮರಣದ ಮೊಕದ್ದಮೆ ದಾಖಲಿಸಿದ್ದರು. ನಂತರ ಮೃತನ ಪತ್ನಿ ಕೊಟ್ಟ ದೂರಿನ ಮೇರೆ ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗಾಗಿ ಶೋಧ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.