ಕೊಲೊರ‍್ಯಾಡೊದಲ್ಲಿ ಪ್ರವಾಹ: ನೂರಾರು ಜನ ನಾಪತ್ತೆ

7

ಕೊಲೊರ‍್ಯಾಡೊದಲ್ಲಿ ಪ್ರವಾಹ: ನೂರಾರು ಜನ ನಾಪತ್ತೆ

Published:
Updated:

ಲಾಸ್‌ ಏಂಜಲೀಸ್‌ (ಪಿಟಿಐ): ಕೊಲೊರ‍್ಯಾಡೊದಲ್ಲಿ ಉಂಟಾಗಿರುವ ಪ್ರವಾಹದಿಂದ ನೂರಾರು ಜನ ನಾಪತ್ತೆಯಾಗಿದ್ದು, 500ಕ್ಕೂ ಹೆಚ್ಚು ಜನ ಪ್ರವಾಹದಲ್ಲಿ ಸಿಲುಕಿರುವ ಭೀತಿ ಎದುರಾಗಿದೆ.ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ತುರ್ತು ಸೇವಾಕರ್ತರು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಪ್ರವಾಹದಿಂದಾಗಿ ಮೊಬೈಲ್‌ ಗೋಪುರಗಳಿಗೆ ಹಾನಿಯಾಗಿರುವ ಕಾರಣ ಸಹಾಯವನ್ನು ಅಪೇಕ್ಷಿಸುವವರ ನಿದಿರ್ಷ್ಟ ಸ್ಥಳವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರವಾಹದಿಂದಾಗಿ ಆಸ್ತಿಪಾಸ್ತಿ ಕಳೆದುಕೊಂಡಿರುವವರ ಸಹಾಯಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ.ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಹೆಲಿಕಾಪ್ಟರ್‌ಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry