ಯಾದಗಿರಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಹಳ್ಳಿಗಳಲ್ಲಿ ಕೊಳವೆಬಾವಿಗಳ ದುರಸ್ತಿ ಮಾಡಿ, ನೀರು ಸರಬರಾಜು ಮಾಡಲು ತಂಡಗಳನ್ನು ರಚಿಸಲಾಗಿದೆ. ಶಹಾಪುರ, ಸುರಪುರ ತಾಲ್ಲೂಕುಗಳಿಗೆ ತಲಾ ರೂ. 11 ಲಕ್ಷ ಹಾಗೂ ಯಾದಗಿರಿ ತಾಲ್ಲೂಕಿಗೆ ರೂ.5 ಲಕ್ಷಗಳಂತೆ ಒಟ್ಟು ರೂ. 27 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಮಂಜುಳಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕು ಟಾಸ್ಕ್ ಫೋರ್ಸ್ ಸಮಿತಿಗಳು ಸಲ್ಲಿಸಿರುವ ಪ್ರಸ್ತಾವನೆಯ ಅನ್ವಯ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಒಟ್ಟು 248 ಗ್ರಾಮಗಳಲ್ಲಿ ರೂ. 3.21 ಕೋಟಿ ಮೊತ್ತದ ವಿವಿಧ ದುರಸ್ತಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಮೇವು ಬ್ಯಾಂಕ್ ಸ್ಥಾಪಿಸಲು ಕ್ರಮ ಕೊಳ್ಳಲಾಗಿದ್ದು. ಪ್ರತಿ ತಾಲ್ಲೂಕಿಗೆ ತಲಾ ರೂ. 3 ಲಕ್ಷದಂತೆ ಒಟ್ಟು ರೂ. 9 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಯಾದಗಿರಿ ತಾಲ್ಲೂಕಿನ ಗುರಮಠಕಲ್, ಬಳಿಚಕ್ರ ಮತ್ತು ಕೊಂಕಲ್, ಶಹಾಪುರ ತಾಲ್ಲೂಕಿನ ಚಾಮನಾಳ, ಹಯ್ಯೊಳ (ಬಿ), ಗೋನಾಳ, ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್. ಗ್ರಾಮಗಳಲ್ಲಿ ಮೇವು ಬ್ಯಾಂಕ್ ಸ್ಥಾಪಿಸಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸುರಪುರ ತಾಲ್ಲೂಕಿನಲ್ಲಿ ಅಲ್ಹಾಳ, ಕೋಳಿಹಾಳ ಮತ್ತು ಶ್ರೀನಿವಾಸಪುರ ಒಟ್ಟು 3 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಬೇವಿನಾಳ ಮತ್ತು ಯಕ್ತಾಪುರ ಆಶ್ರಯ ಕಾಲೊನಿಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುವುದು ಪಂಚಾಯತ್ ರಾಜ್ ಎಂಜಿನಿಯರಿಂಗ್ನ ಪ್ರಭಾರ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಬಸಪ್ಪ ಮೆಕಾಲೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಇಲಾಖೆಯಿಂದ ಟಾಸ್ಕ್ಪೋರ್ಸ್ ಸಮಿತಿಯಿಂದ ಒಟ್ಟು 376 ಕಾಮಗಾರಿಗಳಿಗೆ ರೂ. 2.47 ಕೋಟಿ ಮೊತ್ತದ ಕುಡಿಯುವ ನೀರಿನ ದುರಸ್ತಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದ್ದು, ರೂ. 2.30 ಕೋಟಿ ಬಿಡಗಡೆ ಮಾಡಲಾಗಿದೆ.

ಪಶುವೈದ್ಯ ಇಲಾಖೆಗೆ ಔಷಧಿಗಾಗಿ ರೂ. 15 ಲಕ್ಷ ಬಿಡುಗಡೆ ಮಾಡಲಾಗಿದೆ. ಸದ್ಯ ರೂ. 3.89 ಲಕ್ಷಗಳ ಅನುದಾನ ತುರ್ತು ಕಾಮಗಾರಿಗಳಿಗಾಗಿ ಜಿಲ್ಲಾಡಳಿತದಲ್ಲಿ ಲಭ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಮಂಜುಳಾ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ವೇದಿಕೆಯಲ್ಲಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.