ಭಾನುವಾರ, ಜುಲೈ 25, 2021
25 °C

ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಮೈಸೂರು ರಸ್ತೆಯ ನಾಯಂಡನಹಳ್ಳಿ ಬಳಿಯ ಪಂತರಪಾಳ್ಯದಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ನಿರ್ಮಿಸಿರುವ 1088 ಮನೆಗಳನ್ನು ಸಚಿವ ವಿ.ಸೋಮಣ್ಣ ಇತ್ತೀಚೆಗೆ ಉದ್ಘಾಟಿಸಿದರು.‘ನರ್ಮ್’ ಮತ್ತು ಬಿಎಸ್‌ಯುಪಿ ಯೋಜನೆಯಡಿ ಮಂಡಳಿಯು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿದೆ. ಮೂರು ಮಹಡಿ ಕಟ್ಟಡದಲ್ಲಿ ವಾಸಯೋಗ್ಯ ಮನೆಗಳನ್ನು ನಿರ್ಮಾಣ ಮಾಡಿದೆ.‘ನರ್ಮ್ ಮತ್ತು ಬಿಎಸ್‌ಯುಪಿ ಯೋಜನೆಯಡಿ ಪಂತರಪಾಳ್ಯದಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ 1,088 ಹಾಗೂ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿಯಲ್ಲಿ 4.41 ಕೋಟಿ ರೂಪಾಯಿ ವೆಚ್ಚದಲ್ಲಿ 210 ಮನೆಗಳನ್ನು ನಿರ್ಮಿಸಲಾಗಿದೆ’ ಎಂದು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಎಸ್.ಪುಟ್ಟಸ್ವಾಮಿ ಹೇಳಿದರು.‘ಮನೆಗಳ ನಿರ್ಮಾಣಕ್ಕೆ ತಗಲುವ ಒಟ್ಟು ವೆಚ್ಚದಲ್ಲಿ ಶೇ 50ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಶೇ 40ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಾಕಿ ಉಳಿದ  ಶೇ 10ರಷ್ಟು ಹಣವನ್ನು ಫಲಾನುಭವಿಗಳು ಭರಿಸಬೇಕಾಗುತ್ತದೆ’ ಎಂದರು. ‘ಮನೆಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ.ಇವುಗಳನ್ನು  ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು’ ಎಂದರು.ಶಾಸಕ ಪ್ರಿಯಕೃಷ್ಣ, ಮೇಯರ್ ಎಸ್.ಕೆ.ನಟರಾಜ್, ಪಾಲಿಕೆ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ರವೀಂದ್ರ, ಪಾಲಿಕೆ ಸದಸ್ಯರಾದ ಎಚ್.ಎಸ್. ರಾಜೇಶ್ವರಿ ಬೆಳಗೋಡ್ ಟಿ.ವಿ. ಕೃಷ್ಣ, ವಸತಿ ಇಲಾಖೆ ಕಾರ್ಯದರ್ಶಿ ಎಂ. ಲಕ್ಷ್ಮಿನಾರಾಯಣ ಇತರರು ಉಪಸ್ಥಿತರಿದ್ದರು.ಇದಕ್ಕೂ ಮೊದಲು ಸಚಿವರು ಅಗ್ರಹಾರ ದಾಸರಹಳ್ಳಿ ನಿರ್ಮಿಸಿರುವ 210 ಮನೆಗಳನ್ನು ಉದ್ಘಾಟಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.