ಕೊಳ್ಳೇಗಾಲ: ಮುಖ್ಯಮಂತ್ರಿಗೆ ಗೌರವ ರಕ್ಷೆ

ಶನಿವಾರ, ಜೂಲೈ 20, 2019
23 °C

ಕೊಳ್ಳೇಗಾಲ: ಮುಖ್ಯಮಂತ್ರಿಗೆ ಗೌರವ ರಕ್ಷೆ

Published:
Updated:

ಕೊಳ್ಳೇಗಾಲ:  ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಕೊಳ್ಳೇಗಾಲ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಳ್ಳೆಗಾಲಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಅವರಿಗೆ ಪಟ್ಟಣದ ಎಂ.ಜಿ.ಎಸ್.ವಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಗೌರವ ರಕ್ಷೆ ನೀಡಲಾಯಿತು.ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿ ಕಾರಿ ಕೆ. ಅಮರನಾರಾಯಣ, ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುಡೂರು ಭೀಮಸೇನ, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅವರು, ಶಾಸಕ ಜಿ.ಎನ್. ನಂಜುಂಡಸ್ವಾಮಿ ಮುಖ್ಯ ಮಂತ್ರಿಗಳನ್ನು ಸ್ವಾಗತಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯ ಕೆ.ಆರ್. ಮಲ್ಲಿಕಾರ್ಜುನಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷ ಮಂಗಳಗೌರಿ, ಉಪಾಧ್ಯಕ್ಷ ಜೆ. ಹರ್ಷ, ಬಿಜೆಪಿ ಮುಖಂಡರು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು. ನಂತರ ಮುಖ್ಯಮಂತ್ರಿಗಳು ರಸ್ತೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.ಕಾಮಗೆರೆಗೆ ಸಿಎಂ ಭೇಟಿ

ಮುಖ್ಯಮಂತ್ರಿ  ಬಿ.ಎಸ್.  ಯಡಿ ಯೂರಪ್ಪಅವರು ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮತ್ತು ಉದ್ಘಾಟನೆ ನೆರವೇರಿಸಲು ಶುಕ್ರವಾರ ಕೊಳ್ಳೇಗಾಲ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಬಂದು ಅಲ್ಲಿಂದ ರಸ್ತೆ ಮೂಲಕ ಕಾಮಗೆರೆಗೆ ಬಂದರು.ಈ ಸಂದರ್ಭದಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಶಾಸಕಿ ಪರಿಮಳ ನಾಗಪ್ಪ ಮತ್ತು ಬಿಜೆಪಿ ಮುಖಂಡರು ಸ್ವಾಗತಿಸಿದರು.ಮೆರವಣಿಗೆಯಲ್ಲಿ ಬಂದ ಯಡಿಯೂರಪ್ಪನವರು ಮಾಜಿ ಸಚಿವ ದಿವಂಗತ ನಾಗಪ್ಪ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ನಂತರ ಮಾಜಿ ಶಾಸಕಿ ಪರಿಮಳ ನಾಗಪ್ಪ ಅವರ ಮನೆಗೆ ಭೇಟಿನೀಡಿ, ಮಹದೇಶ್ವರ ಬೆಟ್ಟದತ್ತ ಪ್ರಯಾಣ ಬೆಳೆಸಿದರು.ರಾಮಾಪುರ ಜಿ.ಪಂ. ಸದಸ್ಯೆ ಚಂದ್ರಕಲಾಬಾಯಿ, ಬಂಡಳ್ಳಿ ಜಿ.ಪಂ. ಸದಸ್ಯ ನಾಗೇಂದ್ರ, ಮುಖಂಡರುಗಳಾದ ರವೀಂದ್ರ ಚಿಕ್ಕಮರೀಗೌಡ, ಜಿ.ಪಂ. ಮಾಜಿ ಸದಸ್ಯ ಜಯಶೀಲಾ ರಾಜ ಶೇಖರ್, ಶಿವಮೂರ್ತಿ, ಆರ್.ಎಂ.ಸಿ ಮಾಜಿ ಅಧ್ಯಕ್ಷ ವೀರೇಂದ್ರಪ್ರಸಾದ್, ಕಾಮಗೆರೆ ಗ್ರಾ.ಪಂ. ಅಧ್ಯಕ್ಷೆ ತೆರೆಸಾ, ನಾಗರಾಜಪ್ಪ, ಮಹದೇವಪ್ಪ, ಜಯ ರಾಜು, ಸುರೇಶ್ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry