ಕೋಟಿ ವೆಚ್ಚದ ನ್ಯಾಯಾಧೀಶರ ವಸತಿ ಗೃಹಕ್ಕೆ ಗುದ್ದಲಿ ಪೂಜೆ

7

ಕೋಟಿ ವೆಚ್ಚದ ನ್ಯಾಯಾಧೀಶರ ವಸತಿ ಗೃಹಕ್ಕೆ ಗುದ್ದಲಿ ಪೂಜೆ

Published:
Updated:
ಕೋಟಿ ವೆಚ್ಚದ ನ್ಯಾಯಾಧೀಶರ ವಸತಿ ಗೃಹಕ್ಕೆ ಗುದ್ದಲಿ ಪೂಜೆ

ಬೇಲೂರು: ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ದ್ದೇಶಿಸಿರುವ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಧೀಶರ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಾಸಕ ವೈ.ಎನ್.ರುದ್ರೇಶ್‌ಗೌಡ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, 33 ಚದರ ಅಡಿಯಲ್ಲಿ ವಸತಿ ಗೃಹ ಮತ್ತು ಗೃಹ ಕಚೇರಿ ನಿರ್ಮಿಸಲಾಗುವುದು. ಜೊತೆಗೆ ವಸತಿ ಗೃಹಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಕೈಗೊಳ್ಳಲಾ ಗುವುದು.

 

ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಕಳೆದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹೆಚ್ಚು ವರಿ ಕಟ್ಟಡ ನಿರ್ಮಿಸಲಾಗಿದೆ ಎಂದರು.ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಪ್ರಕಾಶ್, ಗುತ್ತಿಗೆದಾರ ರವಿಶಂಕರ್ ಹಾಜರಿದ್ದರು.

ವ್ಯತ್ಯಯ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಶುದ್ಧೀಕರಣ ಘಟಕದಲ್ಲಿ (ಫಿಲ್ಟರ್ ಹೌಸ್) ಫಿಲ್ಟರ್ ಬೆಡ್ ಕಾಮಗಾರಿ ನಡೆಯುತ್ತಿರುವುದರಿಂದ ಪಟ್ಟಣದಲ್ಲಿ ಕೆಲ ದಿನಗಳ ಕಾಲ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪುರಸಭಾಧ್ಯಕ್ಷ ತೊ.ಚ. ಅನಂತಸುಬ್ಬರಾಯ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry