ರಾಂಚಿ (ಐಎಎನ್ಎಸ್): ಬಹುಕೋಟಿ ಹಣ ಲೇವಾದೇವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಸಹಾಯಕ ವಿಜಯ್ ಜೋಷಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ.) 170 ಕೋಟಿ ರೂಪಾಯಿ ಅಕ್ರಮ ಎಸಗಿರುವ ಬಗ್ಗೆ ಆರೋಪಪಟ್ಟಿ ಸಲ್ಲಿಸಿದೆ.

‘ಜೋಷಿ ಅವರು ಹಲವು ನಕಲಿ ಕಂಪೆನಿಗಳನ್ನು ಸೃಷ್ಟಿಸಿ 169.92 ಕೋಟಿ ರೂಪಾಯಿ ಕಪ್ಪು ಹಣವನ್ನು ಸಕ್ರಮಗೊಳಿಸಿಕೊಂಡಿದ್ದಾರೆ’ ಎಂದು ಇ.ಡಿ. ಪರ ವಕೀಲ ಎಸ್.ಆರ್. ದಾಸ್ ತಿಳಿಸಿದ್ದಾರೆ.

ಕೋಡಾ ಅವರು 2,500 ಕೋಟಿ ರೂಪಾಯಿಗಳ ಹಣ ಲೇವಾದೇವಿ ನಡೆಸಿದ ಆರೋಪ ಎದುರಿಸುತ್ತಿದ್ದು, ಅವರ ಮತ್ತು ಅವರ ಸಹವರ್ತಿಗಳ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೋಡಾ ಮತ್ತು ಅವರ ಸಹಚರರು ಒಂದು ವರ್ಷಕ್ಕೂ ಅಧಿಕ ಸಮಯದಿಂದ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.