ಕೋಡಿಹಳ್ಳಿ ವಿರುದ್ಧ ಜನಜಾಗೃತಿ
ಮೈಸೂರು: `ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಜೈಲಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಪ್ರಜಾಪ್ರಗತಿ ರಂಗದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರಾಜ್ಯದಾದ್ಯಂತ ಜನಜಾಗೃತಿ ಮೂಡಿಸಲಾಗುವುದು~ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದರು.
`ರಾಜ್ಯದ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆದು ಜೈಲಿಗೆ ಹೋದ ವ್ಯಕ್ತಿಯೊಂದಿಗೆ ಮಾತುಕತೆ ನಡೆಸುವ ಮೂಲಕ ಚಂದ್ರೇಶೇಖರ್ ರಾಜ್ಯದ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ರೈತ ಹೋರಾಟಗಾರರ ಹೆಸರಲ್ಲಿ ಸೋಗು ಹಾಕುವವರ ವಿರುದ್ಧ ಪ್ರತಿ ಜಿಲ್ಲೆಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.