ಬೆಂಗಳೂರು: ನ್ಯಾಯಮೂರ್ತಿಗಳ ವಸತಿಗೃಹಕ್ಕೆ ಪೀಠೋಪಕರಣಗಳನ್ನು ಒದಗಿಸುವ ಸಂಬಂಧ ಕರೆಯಲಾಗಿರುವ ಟೆಂಡರ್ನಲ್ಲಿಯೇ ಅವ್ಯವಹಾರ ನಡೆದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಟೆಂಡರ್ ಅಧಿಸೂಚನೆಯನ್ನು ರದ್ದು ಮಾಡಿ ಮಂಗಳವಾರ ಆದೇಶಿಸಿದೆ.

ಶಸ್ತ್ರಚಿಕಿತ್ಸೆ ಪರವಾನಗಿಗೆ ತಡೆ
ನಗರದ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ ನಡೆಸಲು ನೀಡಲಾಗಿರುವ ಪರವಾನಗಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
2010ನೇ ಸಾಲಿನಲ್ಲಿ ಮೇಜರ್ ಪಂಕಜ್ ರಾಯ್ ಅವರ ಪತ್ನಿಯ ಮೂತ್ರಪಿಂಡ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರ್ತವ್ಯಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಶಸ್ತ್ರಚಿಕಿತ್ಸೆಯ ಪರವಾನಗಿಯನ್ನು ರದ್ದು ಮಾಡಲಾಗಿದೆ. ಈ ರದ್ದತಿಯನ್ನು ಆಸ್ಪತ್ರೆಯು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ಈ ಹಿಂದೆ ಪ್ರಶ್ನಿಸಿ, ಅದಕ್ಕೆ ತಡೆ ಪಡೆದುಕೊಂಡಿತ್ತು.
ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಈಗ ಪಂಕಜ್ ರಾಯ್ ಅವರು ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ.

ಲೋಕೋಪಯೋಗಿ ಇಲಾಖೆ 2011ರ ನ.18ರಂದು ಕರೆದಿರುವ ಟೆಂಡರ್ ಅಧಿಸೂಚನೆ ಇದಾಗಿದೆ. ಹೊಸದಾಗಿ ಟೆಂಡರ್ ಕರೆಯುವಂತೆ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ. `ಏಷಿಯನ್ ಫ್ಯಾಬ್ ಟೆಕ್ ಲಿಮಿಟೆಡ್~ಗೆ ಟೆಂಡರ್ ನೀಡಿರುವುದನ್ನು ಪ್ರಶ್ನಿಸಿ `ಸಂಜಯ್ ಮಾರ್ಕೆಟಿಂಗ್ ಅಂಡ್ ಪಬ್ಲಿಸಿಟಿ ಸರ್ವೀಸಸ್~ ಕಂಪೆನಿ ಅರ್ಜಿ ಸಲ್ಲಿಸಿತ್ತು. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ನೀಡಲಾಗಿದೆ ಎನ್ನುವುದು ಅದರ ವಾದವಾಗಿತ್ತು.

ಟೆಂಡರ್ ನಿಯಮ ಉಲ್ಲಂಘಿಸಿರುವುದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. `ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಲೋಕೋಪಯೋಗಿ ಇಲಾಖೆ. ಹಲವು ಪ್ರಕರಣಗಳಲ್ಲಿ ಇದೇ ರೀತಿ ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿರುವುದು ನಮ್ಮ ಗಮನಕ್ಕೆ ಬಂದಿದೆ~ ಎಂದು ಅವರು ಹೇಳಿ ಅಧಿಸೂಚನೆ ರದ್ದು ಮಾಡಿದರು. ಏಷಿಯನ್~ ಕಂಪೆನಿ ಈಗಾಗಲೇ ಅರ್ಧದಷ್ಟು ಕೆಲಸ ಮುಗಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಪರಿಹಾರ ನೀಡುವ ಸಂಬಂಧ ಪರಿಶೀಲಿಸುವಂತೆಯೂ ನ್ಯಾಯಮೂರ್ತಿಗಳು ಇಲಾಖೆಗೆ ನಿರ್ದೇಶಿಸಿದ್ದಾರೆ.

ಮಾನವ ಬಳಕೆ: ಮಾಹಿತಿಗೆ ಆದೇಶ
ಮ್ಯಾನ್ಹೋಲ್ ಮತ್ತು ಒಳಚರಂಡಿ ಶುಚಿಗೊಳಿಸಲು ಪೌರಕಾರ್ಮಿಕರನ್ನು ಬಳಕೆ ಮಾಡದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಮಂಗಳವಾರ ನಿರ್ದೇಶಿಸಿದೆ.

ಪೌರ ಕಾರ್ಮಿಕರ ಬಳಕೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ.ಬೆಂಗಳೂರು ನೀರು ಸರಬರಾಜು ಮಂಡಳಿಯು ಪ್ರಮಾಣ ಪತ್ರ ಸಲ್ಲಿಸಿದ್ದು, ತಾನು ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದೆ.

ಮ್ಯಾನ್ಹೋಲ್ ಶುಚಿಗೊಳಿಸಲು ಹೋಗಿ ಸಾವನ್ನಪ್ಪಿರುವ ಹುಬ್ಬಳ್ಳಿ, ಧಾರವಾಡ, ಕೋಲಾರ ಮೂಲದ ಭಂಗಿಗಳ ಕುಟುಂಬ ವರ್ಗಕ್ಕೆ ಪರಿಹಾರವನ್ನು ನೀಡಲಾಗಿದೆ ಎಂದು ಅದು ವಿವರಿಸಿದೆ. ವಿಚಾರಣೆಯನ್ನು ಮುಂದೂಡಲಾಗಿದೆ.

ಮೂರು ತಿಂಗಳ ಅನುಮತಿ
ಆನೆಗಳ ಹಾವಳಿ ತಪ್ಪಿಸುವ ಸಂಬಂಧ ಮೂರು ತಿಂಗಳ ಒಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಈ ಸಲುವಾಗಿ ರಚಿಸಿರುವ ಸಮಿತಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಆನೆಗಳ ಹಾವಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿನ ವರದಿಯ ಆಧಾರದ ಮೇಲೆ ನ್ಯಾಯಾಲಯವೇ ಖುದ್ದಾಗಿ ಪ್ರಕರಣ ದಾಖಲಿಸಿಕೊಂಡು ನಡೆಸುತ್ತಿರುವ ವಿಚಾರಣೆ ಇದಾಗಿದೆ. ನ್ಯಾಯಾಲಯವೇ ಈ ಸಂಬಂಧ ಸಮಿತಿ ರಚಿಸಿದೆ. ಹಾವಳಿ ತಡೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅದು ಚರ್ಚಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳಲ್ಲಿ ಪೂರ್ಣ ವರದಿ ನೀಡುವಂತೆ ಕೋರ್ಟ್ ಆದೇಶಿಸಿದೆ.

ಸಂಚಾರಿ ಪೀಠ ಕಾಯಂ: ನೋಟಿಸ್
ಗುಲ್ಬರ್ಗದ ಸಂಚಾರಿ ಪೀಠವನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಹೈಕೋರ್ಟ್ ರಿಜಿಸ್ಟ್ರಾರ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ.

ವಕೀಲ ಆರ್.ವೀರಶೆಟ್ಟಿ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ.
`ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯು ಬೆಂಗಳೂರಿನ ಪ್ರಧಾನ ಪೀಠದಲ್ಲಿಯೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಭಾಗಗಳ ಜನತೆಗೆ ಇಲ್ಲಿಯವರೆಗೆ ಬರುವುದು ಕಷ್ಟ ಆಗುತ್ತಿದೆ. ಆದುದರಿಂದ ಅಲ್ಲಿಯೇ ಈ ಅರ್ಜಿಗಳ ವಿಚಾರಣೆ ನಡೆಯಬೇಕು~ ಎನ್ನುವುದೂ ಅರ್ಜಿದಾರರ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.