ಮಂಗಳವಾರ, ಮೇ 24, 2022
31 °C

ಕೋರ್ಟ್ ಕಲಾಪ: ರಾಜಾ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ಸ್ಪೆಕ್ಟ್ರಂ ಪರವಾನಗಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಕಲಾಪದಲ್ಲಿ ಪಾಲ್ಗೊಂಡು ತಮ್ಮ ವಕೀಲರಿಗೆ ಸಹಾಯ ಮಾಡಲು ಅವಕಾಶ ಕೋರಿದ್ದ ಬಂಧಿತ ಮಾಜಿ ದೂರಸಂಪರ್ಕ ಸಚಿವ ಎ.ರಾಜಾ ಅವರ ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿತು.

`ರಾಜಾ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ~ ಎಂದು ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಪ್ರಕಟಿಸಿದರು.ಸುಪ್ರೀಂ ಕೋರ್ಟಿನಲ್ಲಿ ನಡೆಯುವ ಪ್ರಕರಣದ ಕಲಾಪಗಳನ್ನು ಗಮನಿಸುವುದರಿಂದ ತಮ್ಮ ಕಕ್ಷಿದಾರರು ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಅರಿಯಲು ಸಹಾಯಕವಾಗುತ್ತದೆ. ಆದ್ದರಿಂದ ಅವರಿಗೆ ಕಲಾಪ ವೀಕ್ಷಣೆಗೆ ಅನುಮತಿ ನೀಡಬೇಕೆಂದು ರಾಜಾ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.