ಕೋಲಾರ, ಚಿಕ್ಕಬಳ್ಳಾಪುರ ಬಂದ್: ಬಸ್‌ಗೆ ಬೆಂಕಿ

7

ಕೋಲಾರ, ಚಿಕ್ಕಬಳ್ಳಾಪುರ ಬಂದ್: ಬಸ್‌ಗೆ ಬೆಂಕಿ

Published:
Updated:

ಕೋಲಾರ/ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿಗೆ ಆಗ್ರಹಿಸಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೋಮವಾರ ನಡೆದ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಚಿಕ್ಕಬಳ್ಳಾಪುರದಲ್ಲಿ ಬಸ್ ಸುಟ್ಟು ಹಾಕಿದ ಮತ್ತು ಬಾಗೇಪಲ್ಲಿಯಲ್ಲಿ ಮೂರು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ ಘಟನೆಗಳು ನಡೆದಿವೆ. ಸರ್ಕಾರಿ ಕಚೇರಿಗಳು, ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದವು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.ಚಿಕ್ಕಬಳ್ಳಾಪುರ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಲಾಗಿದ್ದ ಆಂಧ್ರಪ್ರದೇಶಕ್ಕೆ ಸೇರಿದ ಬಸ್‌ಗೆ ಬೆಂಕಿ ಹಚ್ಚಿದ ಕೆಲ ಕಿಡಿಗೇಡಿಗಳು ಅಶಾಂತಿ ವಾತಾವರಣ ಉಂಟು ಮಾಡಲು ಯತ್ನಿಸಿದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.ಬಂದ್ ನಿಮಿತ್ತ ಮುಂಜಾನೆ 6ರಿಂದಲೇ ಪ್ರತಿಭಟನಾ ಮೆರವಣಿಗೆ, ಬೈಕ್ ರ್ಯಾಲಿ ಮುಂತಾದವುಗಳನ್ನು ನಡೆಸಿದ ಪ್ರತಿಭಟನಾಕಾರರು ಶಾಶ್ವತ ನೀರಾವರಿಗೆ ಶೀಘ್ರವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಧರಣಿ, ಮೆರವಣಿಗೆಗಳೂ ನಡೆದವು. ಬಿಜೆಪಿ ಹೊರತುಪಡಿಸಿ ವಿವಿಧ ಪಕ್ಷ, ಸಂಘ-ಸಂಸ್ಥೆ, ಸಂಘಟನೆಗಳ ನೂರಾರು ಪ್ರಮುಖರು- ಕಾರ್ಯಕರ್ತರು ಪಕ್ಷಭೇದ ಮರೆತು ಬಂದ್‌ಗೆ ಸಹಕರಿಸಿದರು.ಖಾಸಗಿ ಮತ್ತು ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ಕೆಲವು ಕಡೆ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯ ವಾಪಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಕೆಲ ನಿಮಿಷಗಳ ಕಾಲ ಪ್ರತಿಭಟನೆ ನಡೆಸಿದರು. ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಘಟನೆ ನಡೆದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry