ಶುಕ್ರವಾರ, ಏಪ್ರಿಲ್ 16, 2021
25 °C

ಕೋಳಿ ಸಾಕಾಣಿಕೆಯಿಂದ ಅಧಿಕ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ರಾಜ್ಯದಲ್ಲಿ ಕೋಳಿ ಉದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ರೈತರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್ ಸಲಹೆ ನೀಡಿದರು.ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ನಗರದಲ್ಲಿ ಏರ್ಪಡಿಸಿದ್ದ ಕೋಳಿ ಸಾಕಾಣಿಕೆ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ದೊರಕುವ ಸಹಾಯಧನ ಮತ್ತು ಇತರ ಯೋಜನೆಗಳ ಕುರಿತು ವಿವರ ನೀಡಿದರು.500 ಮಾಂಸದ ಕೋಳಿ ಫಾರ್ಮ್ ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ರೂ.16,600 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಫಲಾನುಭವಿಗಳಿಗೆ ರೂ.25,600ಗಳ ವರೆಗೆ ಸಹಾಯಧನ ಇಲಾಖೆಯಿಂದ ಆದ್ಯತೆಯ ಮೇರೆಗೆ ನೀಡಲಾಗುವುದು ಎಂದರು.ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ರೈತರು ಶಿಬಿರದಲ್ಲಿ ಭಾಗವಹಿಸಿದ್ದರು.

ಫ್ಯೂಚರ್ ಗ್ರೀನ್ ಸಂಸ್ಥೆಯ ಮುಖ್ಯಸ್ಥ ಡಾ.ಬಿ.ಆರ್. ಅಥಣಿ, ಬಿ.ಆರ್. ಹಿರೇಮಠ, ಎಸ್.ಪಿ. ಜಗಲಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.