ಕೌಟುಂಬಿಕ ಕಲಹ: ಆತ್ಮಹತ್ಯೆ

ಭಾನುವಾರ, ಜೂಲೈ 21, 2019
22 °C

ಕೌಟುಂಬಿಕ ಕಲಹ: ಆತ್ಮಹತ್ಯೆ

Published:
Updated:

ಬೆಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಜಯನಗರ ಸಮೀಪದ ಭಕ್ತಿಲಿಂಗೇಶ್ವರ ನಗರದಲ್ಲಿ ಸೋಮವಾರ ನಡೆದಿದೆ.ಗೋವಿಂದರಾಜು ಎಂಬುವರ ಪತ್ನಿ ವಾಣಿ (27) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಎಂಟು ವರ್ಷಗಳಾಗಿದ್ದವು. ಗೋವಿಂದರಾಜು ಅವರು ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮಧ್ಯೆ ಆಗಾಗ್ಗೆ ಜಗಳವಾಗುತ್ತಿತ್ತು. ಅಂತೆಯೇ ಸಂಜೆಯೂ ಅವರ ನಡುವೆ ಜಗಳವಾಗಿತ್ತು. ಇದರಿಂದ ಬೇಸರಗೊಂಡ ವಾಣಿ ಅವರು ಪತಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ವಾಣಿ ಅವರಿಗೆ ಮೂವರು ಮಕ್ಕಳಿದ್ದಾರೆ. `ಅಳಿಯನ ಕಿರುಕುಳದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಗೋವಿಂದರಾಜುವೇ ಕಾರಣ~ ಎಂದು ವಾಣಿ ಪೋಷಕರು ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry