ಬುಧವಾರ, ಏಪ್ರಿಲ್ 21, 2021
25 °C

ಕ್ಯಾರಿ ಓವರ್ ಪದ್ಧತಿಯೇ ಇರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಪ್ರಸಕ್ತ ಸಾಲಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ರದ್ದುಗೊಳಿಸುವಂತೆ ಸರ್ಕಾರ ನೀಡಿ ರುವ ಆದೇಶವನ್ನು ಹಿಂದಕ್ಕೆ ಪಡೆಯ ಬೇಕು ಎಂದು ಆಗ್ರಹಿಸಿ ಡಿಪ್ಲೊಮಾ ವಿದ್ಯಾರ್ಥಿಗಳು ಸೋಮವಾರ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಯಲ್ಲಾಪುರ ನಾಕಾದಿಂದ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ಆದೇಶದ ವಿರುದ್ಧ ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷ ಸಿ.ಎಫ್. ಈರೇಶ ಕಳೆದ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಪ್ರಧಾನ ಕಾರ್ಯದರ್ಶಿ ಜಂಟಿಯಾಗಿ ಸಮಾ ಲೋಚಿಸಿ 3 ಮತ್ತು 5ನೇ ಸೆಮಿಸ್ಟರ್ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸಿದ್ದರು. ಆದರೆ ಪ್ರಸಕ್ತ ಸಾಲಿನಲ್ಲಿ ಈ ಪದ್ಧತಿ ರದ್ದುಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ 3 ಮತ್ತು 5ನೇ ಸೆಮಿಸ್ಟರ್ ಪ್ರವೇಶ ವನ್ನು ನಾಲ್ಕು ವಿಷಯಗಳಿಗಿಂತ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ನಿರಾಕರಿಸಲಾ ಗುತ್ತಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದರು. ಕೇವಲ ತಾಂತ್ರಿಕ ಶಿಕ್ಷಣದಲ್ಲಿ ಮಾತ್ರ ಈ ಪದ್ಧತಿ ರದ್ದು ಮಾಡಲಾ ಗಿದ್ದು ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ.

 

ವಿದ್ಯಾರ್ಥಿಗಳ ಹಿತ ಕ್ಕಾಗಿ ಕ್ಯಾರಿ ಓವರ್ ಪದ್ಧತಿ ರದ್ದು ಗೊಳಿಸುವ ಆದೇಶ ಹಿಂಪಡೆಯಬೇಕು. ಹಿಂದಿನ ವರ್ಷದ ಪದ್ಧತಿ ಮುಂದು ವರೆಸಿ ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಪ್ರಮುಖರಾದ ರೇವತಿ ಒಡ್ಡರ್, ರತ್ನಾ ಗೌಡ, ರಾಘ ವೇಂದ್ರ ಮಹಾಲೆ, ಸಚಿನ್  ಗಾಂವಕರ್, ಅಕ್ಷಯ ಶೇಟ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.