ಮಂಗಳವಾರ, ಏಪ್ರಿಲ್ 20, 2021
29 °C

ಕ್ಯಾ.ಲಕ್ಷ್ಮಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾನ್ಪುರ (ಪಿಟಿಐ): ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಸುಭಾಷ್ ಚಂದ್ರ ಬೋಸ್ ಅವರು ಕಟ್ಟಿದ್ದ ನ್ಯಾಷನಲ್ ಇಂಡಿಯನ್ ಆರ್ಮಿ (ಐಎನ್‌ಎ) ಪ್ರಮುಖ ಮುಂದಾಳಾಗಿದ್ದ ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ 97 ವರ್ಷದ ತಮ್ಮ ತಾಯಿಗೆ ಗುರುವಾರ ಬೆಳಿಗ್ಗೆ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ವೈದ್ಯರ ತಂಡ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಅವರ ಪುತ್ರಿ ಸುಭಾಷಿಣಿ ಅಲಿ ಸುದ್ದಿಗಾರರಿಗೆ ತಿಳಿಸಿದರು.ವೃತ್ತಿಯಿಂದ ವೈದ್ಯರಾಗಿದ್ದ ಸೆಹಗಲ್ ಅವರು ಐಎನ್‌ಎದಲ್ಲಿ ಝಾನ್ಸಿ ರಾಣಿ  ಲಕ್ಷ್ಮಿಬಾಯಿ ದಂಡಿನ ಕಮಾಂಡರ್ ಆಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.