ಬುಧವಾರ, ಜೂನ್ 16, 2021
23 °C
ಚುಟುಕು ಗುಟುಕು

ಕ್ರಿಕೆಟ್‌: ಇಂದು ಶ್ರೀಲಂಕಾ–ಆಫ್ಘನ್‌ ಪೈಪೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೀರ್‌ಪುರ (ಪಿಟಿಐ): ಬಾಂಗ್ಲಾದೇಶ ವಿರುದ್ಧ ಗೆಲುವು ಪಡೆದು ಐತಿಹಾಸಿಕ ಸಾಧನೆ ಮಾಡಿರುವ ಆಫ್ಘಾನಿಸ್ತಾನ ತಂಡದವರು ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ಸೋಮವಾರ ಶ್ರೀಲಂಕಾದ ಸವಾಲನ್ನು ಎದುರಿಸಲಿದ್ದಾರೆ.ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ, ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌್ಕ್ರೀಡಾಪಟುಗಳಿಗೆ ಇಂದು ಪ್ರಶಸ್ತಿ ಪ್ರದಾನ

ಬೆಂಗಳೂರು:
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳಿಗೆ ಸೋಮವಾರ ಪ್ರಶಸ್ತಿ ಪ್ರದಾನ ಹಾಗೂ ನಗದು ಬಹುಮಾನ ನೀಡಲಾಗುತ್ತದೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಕಾರ್ಯಕ್ರಮ ಯವನಿಕಾ ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಇದೇ ವೇಳೆ ಪ್ರತಿಭಾವಂತ ಸೈಕ್ಲಿಸ್ಟ್‌ಗಳಿಗೆ ಸೈಕಲ್‌ ವಿತರಿಸಲಾಗುತ್ತದೆ.ಕಬಡ್ಡಿ: ಸೆಮಿಫೈನಲ್‌ಗೆ ಆಳ್ವಾಸ್

ನಿಪ್ಪಾಣಿ:
ಬೆಂಗಳೂರಿನ ವಿಜಯ ಬ್ಯಾಂಕ್‌ ಮತ್ತು ಮೂಡುಬಿದಿರೆಯ ಆಳ್ವಾಸ್‌ ತಂಡದವರು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ‘ಎ’ ಗ್ರೇಡ್‌ ಮುಕ್ತ ಕಬಡ್ಡಿ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ಸೆಮಿಫೈನಲ್‌ ಪ್ರವೇಶಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.