ಶುಕ್ರವಾರ, ಆಗಸ್ಟ್ 7, 2020
23 °C

ಕ್ರಿಕೆಟ್: ಅಜರ್ ಅಲಿ ಶತಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರಿಕೆಟ್: ಅಜರ್ ಅಲಿ ಶತಕ

ಕೊಲಂಬೊ: ಅಜರ್ ಅಲಿ (157) ಅವರ ಶತಕದ ನೆರವಿನಿಂದ ಪಾಕಿಸ್ತಾನ ತಂಡದವರು ಇಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರಿ ಮೊತ್ತ ದಾಖಲಿಸಿದ್ದಾರೆ. ಆದರೆ ಪಂದ್ಯಕ್ಕೆ  ಮಳೆ ಅಡ್ಡಿಪಡ್ಡಿಸಿದೆ.ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದ ಎರಡನೇ ದಿನದ ಆಟದ ಅಂತ್ಯಕ್ಕೆ ಪಾಕ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 134.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 488 ರನ್ ಗಳಿಸಿದೆ.ಆರಂಭಿಕ ಬ್ಯಾಟ್ಸ್‌ಮನ್ ಮೊಹಮ್ಮದ್ ಹಫೀಜ್ (196; 331 ಎ, 20 ಬೌಂ, 1 ಸಿ.) ಕೇವಲ ನಾಲ್ಕು ರನ್‌ಗಳಿಂದ ದ್ವಿಶತಕ ತಪ್ಪಿಸಿಕೊಂಡರು. 295 ಎಸೆತ ಎದುರಿಸಿದ ಅಜರ್ 9 ಬೌಂಡರಿ ಗಳಿಸಿದರು. ಇವರಿಬ್ಬರು ಎರಡನೇ ವಿಕೆಟ್‌ಗೆ 287 ರನ್ ಸೇರಿಸಿದರು. ಮಳೆ ಕಾರಣ ಎರಡನೇ ದಿನ ಕೇವಲ 44.2 ಓವರ್‌ಗಳ ಆಟ ಮಾತ್ರ ನಡೆಯಿತು.ಸಂಕ್ಷಿಪ್ತ ಸ್ಕೋರ್: ಪಾಕಿಸ್ತಾನ: ಮೊದಲ ಇನಿಂಗ್ಸ್: 134.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 488 (ಮೊಹಮ್ಮದ್ ಹಫೀಜ್ 196, ಅಜರ್ ಅಲಿ 157, ಯೂನಿಸ್ ಖಾನ್ 32; ರಂಗನಾ ಹೇರತ್ 143ಕ್ಕೆ2).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.