ಕ್ರಿಕೆಟ್: ಕೋಲ್ಕತ್ತದ ಅಲ್ಪ ಮೊತ್ತ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕ್ರಿಕೆಟ್: ಕೋಲ್ಕತ್ತದ ಅಲ್ಪ ಮೊತ್ತ

Published:
Updated:

ಹೈದರಾಬಾದ್:  ಕೋಲ್ಕತ್ತ ನೈಟ್ ರೈಡರ್ಸ್ ತಂಡದವರು ಸೋಮವಾರ ಇಲ್ಲಿ ಆರಂಭವಾದ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಆಕ್ಲೆಂಡ್ ಎದುರು ಅಲ್ಪ ಮೊತ್ತ ದಾಖಲಿಸಿದ್ದಾರೆ.ಉಪ್ಪಳದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.ಈ ಗುರಿ ಬೆನ್ನಟ್ಟಿರುವ ಆಕ್ಲೆಂಡ್ ತಂಡ ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆ 7 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಕಲೆಹಾಕಿತ್ತು.ಇದಕ್ಕೂ ಮೊದಲು ನೈಟ್ ರೈಡರ್ಸ್ ತಂಡಕ್ಕೆ ಮಾನ್ವಿಂದರ್ ಬಿಸ್ಲಾ (45) ಹಾಗೂ ಜಾಕ್ ಕಾಲಿಸ್ (33) ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 57 ಎಸೆತಗಳಲ್ಲಿ 73 ರನ್ ಸೇರಿಸಿದರು. ಆದರೆ ಉಳಿದ     ಬ್ಯಾಟ್ಸ್‌ಮನ್‌ಗಳು ತಂಡದ ಮೊತ್ತ ಬೆಳೆಸುವಲ್ಲಿ ವಿಫಲರಾದರು.ಸಂಕ್ಷಿಪ್ತ ಸ್ಕೋರ್: ಕೋಲ್ಕತ್ತ ನೈಟ್ ರೈಡರ್ಸ್: 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 (ಮಾನ್ವಿಂದರ್ ಬಿಸ್ಲಾ 45, ಜಾಕ್ ಕಾಲಿಸ್ 33, ಯೂಸುಫ್ ಪಠಾಣ್ 12; ಕೈಲ್ ಮಿಲ್ಸ್ 24ಕ್ಕೆ2); ಆಕ್ಲೆಂಡ್ ಎದುರಿನ ಪಂದ್ಯ.

(ವಿವರ ಅಪೂರ್ಣ)

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry