ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ (ಸೆ.23) ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂದ್ಯದ ದಿನ ಬೆಳಿಗ್ಗೆ 2 ಗಂಟೆಯಿಂದ ರಾತ್ರಿ 11.30ರವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ.

ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಮತ್ತು ಕ್ರೀಡಾಂಗಣದ ಕಾಂಪೌಂಡ್ಗೆ ಹೊಂದಿಕೊಂಡಂತಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಬಿಎಂಟಿಸಿ ಬಸ್ಗಳನ್ನು ಹೊರತುಪಡಿಸಿ ಇತರೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಮತ್ತು ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ, ಗ್ರ್ಯಾಂಡ್ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ರಾಜಾರಾಮ್ ಮೋಹನ್ ರಾಯ್ ವೃತ್ತದವರೆಗೆ, ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ, ರೇಸ್ಕೋರ್ಸ್ ರಸ್ತೆ, ಕಬ್ಬನ್ಪಾರ್ಕ್ ಒಳ ಭಾಗದ ರಸ್ತೆ ಮತ್ತು ಪ್ರೆಸ್ಕ್ಲಬ್ ಮುಂಭಾಗದಲ್ಲಿ ವಾಹನ ನಿಲ್ಲಿಸುವಂತಿಲ್ಲ.

ನಿಲುಗಡೆಗೆ ಅವಕಾಶ: ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕರು ಹಾಗೂ ಕೆಎಸ್ಸಿಎ ಸದಸ್ಯರು ಕಡ್ಡಾಯವಾಗಿ ಕಂಠೀರವ ಕ್ರೀಡಾಂಗಣದ ಒಳಗೆ ವಾಹನ ನಿಲ್ಲಿಸಬೇಕು. ಕ್ರೀಡಾಂಗಣದ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಾಹನ ನಿಲುಗಡೆಗೆ ಬಿ.ಆರ್.ವಿ ಮೈದಾನದಲ್ಲಿ ಅವಕಾಶ ನೀಡಲಾಗಿದೆ.

ಎಂ.ಜಿ.ರಸ್ತೆ, ಸಿ.ಟಿ.ಓ ವೃತ್ತ ಹಾಗೂ ಬಿ.ಆರ್.ವಿ ಮೈದಾನದ ಬಳಿ ಮೆಟ್ರೊ ರೈಲು ಕಾಮಗಾರಿ ನಡೆಯುತ್ತಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಆದ್ದರಿಂದ ಕ್ರಿಕೆಟ್ ನೋಡಲು ಬರುವವರು ಸಾಧ್ಯವಾದಷ್ಟು ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.