ಮಂಗಳವಾರ, ಮೇ 11, 2021
24 °C

ಕ್ರಿಕೆಟ್: ಪಾಕಿಸ್ತಾನಕ್ಕೆ ಪ್ರಯಾಸದ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬುಲವಾಯೊ: ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಐದು ರನ್‌ಗಳ ಪ್ರಯಾಸದ ಗೆಲುವು ಪಡೆಯಿತು.ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ಗೆ 247 ರನ್ ಪೇರಿಸಿತು. ಯೂನಿಸ್ ಖಾನ್ (78) ಪಾಕ್ ಪರ ಉತ್ತಮ ಪ್ರದರ್ಶನ ನೀಡಿದರು.ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ ತಂಡ ವುಸಿ ಸಿಬಾಂಡ (73) ಮತ್ತು ಬ್ರೆಂಡನ್ ಟೇಲರ್ (84) ಅವರ ಹೋರಾಟದ ಹೊರತಾಗಿಯೂ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 242 ರನ್ ಗಳಿಸಲಷ್ಟೇ ಯಶಸ್ವಿಯಾಯಿತು. ಈ ಗೆಲುವಿನ ಮೂಲಕ ಪಾಕ್ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ರಲ್ಲಿ ಮುನ್ನಡೆ ಪಡೆಯಿತು.ಸಂಕ್ಷಿಪ್ತ ಸ್ಕೋರ್: ಪಾಕಿಸ್ತಾನ: 50 ಓವರ್‌ಗಳಲ್ಲಿ 7 ವಿಕೆಟ್‌ಗೆ 247 (ಯೂನಿಸ್ ಖಾನ್ 78, ಮಿಸ್ಬಾ ಉಲ್ ಹಕ್ 54, ಉಮರ್ ಅಕ್ಮಲ್ 36, ರೇ ಪ್ರೈಸ್ 39ಕ್ಕೆ 2, ಕ್ರಿಸ್ ಮೊಫು 54ಕ್ಕೆ 2). ಜಿಂಬಾಬ್ವೆ: 50 ಓವರ್‌ಗಳಲ್ಲಿ 7 ವಿಕೆಟ್‌ಗೆ 242 (ವುಸಿ ಸಿಬಾಂಡ 73, ಬ್ರೆಂಡನ್ ಟೇಲರ್ 84, ಐಜಾಜ್ ಚೀಮಾ 36ಕ್ಕೆ 3) ಫಲಿತಾಂಶ: ಪಾಕಿಸ್ತಾನಕ್ಕೆ 5 ರನ್ ಗೆಲುವು; ಪಂದ್ಯಶ್ರೇಷ್ಠ: ಯೂನಿಸ್ ಖಾನ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.