ಸೋಮವಾರ, ಜೂನ್ 14, 2021
28 °C

ಕ್ರಿಕೆಟ್: ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ಕ್ರಿಕೆಟ್ ಬೆಟ್ಟಿಂಗ್‌ ನಡೆಯುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಪಟ್ಟಣದ ಗ್ರಾಮಾಂತರ ಪೊಲೀಸರು ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಐದು ಮಂದಿಯನ್ನು ಬಂಧಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.ತಿಟ್ಟಮಾರನಹಳ್ಳಿ ಗ್ರಾಮದ ಸುನೀಲ್‌ ಎಂಬುವರ ಮನೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಗ್ರಾಮದ ಸುನೀಲ್‌, ಕೋಟೆಯ ರಂಗಸ್ವಾಮಿ, ರವಿ, ದೇವರಹೊಸಹಳ್ಳಿಯ ಪ್ರಮೋದ್‌, ಕರಿಯಪ್ಪನದೊಡ್ಡಿಯ ಸಿದ್ದಪ್ಪಾಜಿ ಎಂಬುವರನ್ನು ಬಂಧಿಸಿದ್ದಾರೆ.  ಇವರು ಶನಿವಾರ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳ ನಡುವೆ ನಡೆಯುತ್ತಿದ್ದ ಫೈನಲ್‌ ಪಂದ್ಯದ ಮೇಲೆ ಬೆಟ್ಟಿಂಗ್‌ ಆಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಬಳಸಿದ್ದ ಒಂದು ಟಿ.ವಿ., 7 ಮೊಬೈಲ್‌ಗಳು, ರೂ.13 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನು ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.