ಸೋಮವಾರ, ಏಪ್ರಿಲ್ 12, 2021
23 °C

ಕ್ರಿಕೆಟ್ ಬೆಟ್ಟಿಂಗ್: ವ್ಯಕ್ತಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೊಡ್ಡ ಪ್ರಮಾಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನರಹರಿ ಎಂಬಾತನನ್ನು ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿದೇಶಿ ಬುಕ್ಕಿಗಳು ಹಾಗೂ ದೇಶದ ರಾಜಕಾರಣಿಗಳೊಂದಿಗೆ ಸಂಪರ್ಕ ಇಟ್ಟುಕೊಂಡಿರುವ ನರಹರಿ ಕೋಟ್ಯಂತರ ರೂಪಾಯಿ ಮೊತ್ತದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ. ಆತ ದೇಶದ ಬಹುತೇಕ ರಾಜ್ಯಗಳಲ್ಲಿ ಹಲವು ವರ್ಷಗಳಿಂದ ಈ ದಂಧೆ ನಡೆಸುತ್ತಿದ್ದ.ಅಲ್ಲದೇ ಆತ ದಕ್ಷಿಣ ಭಾರತದಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಯ ಸೂತ್ರಧಾರಿ ಎಂದು ಉನ್ನತ ಪೊಲೀಸ್ ಮೂಲಗಳು ಹೇಳಿವೆ. ‘ನರಹರಿ ಚೆನ್ನೈನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಅಲ್ಲಿಗೆ ವಿಶೇಷ ಸಿಬ್ಬಂದಿ ತಂಡ ಕಳುಹಿಸಿ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಆತನನ್ನು ಬಿಡುಗಡೆ ಮಾಡುವಂತೆ ರಾಜಕಾರಣಿಗಳು ಒತ್ತಡ ಹೇರುತ್ತಿದ್ದಾರೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.