ಶುಕ್ರವಾರ, ಏಪ್ರಿಲ್ 23, 2021
22 °C

ಕ್ರಿಕೆಟ್: ವಾಹನ ನಿಲುಗಡೆ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಆಸ್ಟ್ರೇಲಿಯಾ ಮತ್ತು ಕೀನ್ಯಾ ತಂಡಗಳ ನಡುವೆ ವಿಶ್ವಕಪ್ ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವ್ಯವಸ್ಥೆಯಲ್ಲಿ  ಬದಲಾವಣೆ ಮಾಡಲಾಗಿದೆ.ವೀಕ್ಷಕರು ಕಂಠೀರವ ಕ್ರೀಡಾಂಗಣದ ಒಳಗೆ ವಾಹನ ನಿಲುಗಡೆ ಮಾಡಬೇಕು. ಶಿವಾಜಿನಗರದ ಬಸ್ ನಿಲ್ದಾಣದ ಮೇಲ್ಭಾಗದಲ್ಲಿಯೂ ವಾಹನ ನಿಲ್ಲಿಸಬಹುದು.



ನಿಲುಗಡೆ ನಿಷೇಧ: ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕ್ವೀನ್ಸ್ ವೃತ್ತದಿಂದ ಸಿಟಿಓ ವೃತ್ತದವರೆಗೆ, ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ, ಕ್ರಿಕೆಟ್ ಮೈದಾನದ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಇರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.



ಸೆಂಟ್ರಲ್ ಸ್ಟ್ರೀಟ್‌ನ ಎರಡೂ ಬದಿ, ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್‌ಬಿಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಮತ್ತು ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ವಾಹನ ನಿಲುಗಡೆಗೆ ಅವಕಾಶವಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.