ಅರಸೀಕೆರೆ: ಉದ್ಯೋಗ ಖಾತರಿ, ವಸತಿ ರಹಿತರಿಗೆ ನಿವೇಶನ ಹಂಚಿಕೆ, ಕುಡಿ ಯುವ ನೀರಿನ ಸಮಸ್ಯೆಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಲು ಗ್ರಾಮಸ್ಥರ ಅನುಮೋದನೆಗೆ ಗ್ರಾಮ ಸಭೆಗಳ ಅನುಮತಿ ಅವಶ್ಯ.

ಅಲ್ಲದೆ ಸಭೆಯಲ್ಲಿ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರುವುದರಿಂದ ಸಮಸ್ಯೆಗಳ ನಿವಾರಣೆ ಸುಲಭವಾಗು ತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಎಚ್.ಎಸ್.ಚಂದ್ರಶೇಖರ್ ತಿಳಿಸಿದರು.

ತಾಲ್ಲೂಕಿನ ಡಿ.ಎಂಕುರ್ಕೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಈಚೆಗೆ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬರದ ತೀವ್ರತೆ ಹೆಚ್ಚಾ ಗಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಸರ್ಕಾರದಿಂದ ದೊರಕುವ ಎಲ್ಲ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಇದೆ.

ಜನರಿಗೆ ಕುಡಿ ಯುವ ನೀರು ಮತ್ತು ಜಾನುವಾರು ಗಳಿಗೆ ಮೇವಿನ ಕೊರತೆ ಎದುರಾಗದಂತೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ಅಲ್ಲದೆ ಈ ಬಾರಿ ಕ್ರಿಯಾಯೋಜನೆಯಲ್ಲಿ 40 ಲಕ್ಷ ರೂಪಾಯಿ ಕಾರ್ಮಿಕ ಆಧಾರಿತ ಬಜೆಟ್ ಅನುಮೋದಿಸಿದ್ದು, ಅದರ ಸೂಕ್ತ ನಿರ್ವಹಣೆ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕಿನಲ್ಲಿ ಅನೇಕ ಇಲಾಖೆಗಳ ಅಧಿಕಾರಿಗಳು ರೈತರಿಗೆ ಸರಿಯಾದ ಮಾಹಿತಿ ನೀಡದೆ ಹಾಗೂ ಪ್ರಚಾರದ ಕೊರತೆಯಿಂದ ಸರ್ಕಾರದ ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ದೊರಕು ತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಇನ್ನು ಮುಂದಾದರೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಫಲಾನುಭವಿ ಗಳಿಗೆ ದೊರಕುವಂತೆ ನಿಗಾವಹಿಸಬೇಕು ಎಂದು ತಾಕೀತು ಮಾಡಿದರು.

ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸಂಪನ್ಮೂಲ ಕ್ರೋಡೀಕರಣ ಇಲ್ಲದೆ ಅಭಿವೃದ್ಧಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿವೆ. ಉದ್ಯೋಗ ಖಾತರಿ ಯೋಜನೆ ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗಳು ಮುಚ್ಚಿಹೋಗುತ್ತಿದ್ದವು. ಇಂದು ಹಳ್ಳಿಗಳ ಅಭಿವೃದ್ಧಿಗೆ ಉದ್ಯೋಗ ಖಾತರಿ ಸಹಕಾರಿಯಗಿದೆ. ಸಾರ್ವಜನಿಕರು ಯೋಜನೆ ದುರ್ಬಳಕೆ ಯಾಗದಂತೆ ನಿಗಾವಹಿಸಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್. ಆರ್.ಶಿವಕುಮಾರ್ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಪಾರ್ವತಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರಮೀಳಾ ಶಂಕರಲಿಂಗಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂಜಮ್ಮ, ಸದಸ್ಯರಾದ ಮರುಳಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಚ್.ಎಸ್. ನಟರಾಜ್, ಎಂ.ಜಿ ಲೋಕೇಶ್, ಗ್ರಾಮದ ಮುಖಂಡ ನಂಜುಂಡಶೆಟ್ಟಿ, ಜಯದೇವ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.