ಮಂಗಳವಾರ, ಜೂನ್ 15, 2021
23 °C

ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ:ಸಾಧನೆಗೆ ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ನುಡಿದರು.`ಮೆಟೀರಿಯಲ್~ ಟೆಕ್ನಾಲಜಿ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಾಪಕರಿಗಾಗಿ ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಸಾಮರ್ಥ್ಯ ಅಭಿವೃದ್ಧಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ರಿಯಾಶೀಲತೆ ಮತ್ತು ಸಂಶೋಧನೆ ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಅಸಾಮಾನ್ಯ ಸಾಧಕನನ್ನಾಗಿ ರೂಪಿಸುತ್ತವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತನೆ ನಡೆಸಬೇಕು ಎಂದು ಕರೆ ನೀಡಿದರು.ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಎಚ್. ಪಟೇಲ್, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ಪ್ರೊ. ಇ. ಚಿತ್ರಶೇಖರ್, ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಬಿ. ಶಿವಕುಮಾರ್, ಪ್ರಧಾನ ಸಂಯೋಜಕ ಪ್ರೊ.ಎಚ್.ಆರ್. ಮನೋಹರ್, ಕೈಗಾರಿಕಾ ಮತ್ತು ಉತ್ಪಾದನಾ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಎಸ್. ಶಶಿಧರ್ ಉಪಸ್ಥಿತರಿದ್ದರು. ಪ್ರಿಯಾಂಕ ಪ್ರಾರ್ಥಿಸಿದರು. ರಾಘವೇಂದ್ರ ರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.

ಮಾರ್ಚ್ 16ರವರೆಗೆ ಈ ಕಾರ್ಯಾಗಾರ ನಡೆಯಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.