ಕ್ರೀಡಾಂಗಣಕ್ಕೆ ರೂ 10 ಕೋಟಿ: ಸಿಎಂ

7

ಕ್ರೀಡಾಂಗಣಕ್ಕೆ ರೂ 10 ಕೋಟಿ: ಸಿಎಂ

Published:
Updated:
ಕ್ರೀಡಾಂಗಣಕ್ಕೆ ರೂ 10 ಕೋಟಿ: ಸಿಎಂ

ಶಿವಮೊಗ್ಗ: ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿವಮೊಗ್ಗ ಕ್ರೀಡಾಂಗಣ ನಿರ್ಮಾಣಕ್ಕೆ 10 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ತಿಳಿಸಿದರು.ನಗರದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ವಿದ್ಯಾಭಾರತಿ ಕರ್ನಾಟಕ ಹಮ್ಮಿಕೊಂಡಿದ್ದ  3ದಿನಗಳ `17ನೇ ಪ್ರಾಂತೀಯ ಅಥ್ಲೆಟಿಕ್ ಕ್ರೀಡಾಕೂಟ~ ಉದ್ಘಾಟಿಸಿ ಅವರು ಮಾತನಾಡಿದರು.ಅಂತರರಾಷ್ಟ್ರೀಯ ಕಬಡ್ಡಿ ತರಬೇತುದಾರ ಪ್ರೊ.ಎಂ.ಜೆ. ಸುಂದರ್‌ರಾಮ್ ಅವರ  `ಗಂಡುಗಲಿಗಳ ಆಟ ಕಬಡ್ಡಿ~ ಪುಸ್ತಕ ಬಿಡುಗಡೆ ಮಾಡಲಾಯಿತು.

 

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಗಿರೀಶ್ ಪಟೇಲ್, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕೆ.ಜಿ. ಕುಮಾರಸ್ವಾಮಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry