ಶುಕ್ರವಾರ, ಮೇ 7, 2021
19 °C

ಕ್ರೀಡಾಂಗಣ ಕಾಮಗಾರಿ ಬಗ್ಗೆ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ನಗರದಲ್ಲಿ ಭೂಸೇನಾ ನಿಗಮದಿಂದ ನಿರ್ಮಿಸಿರುವ ತಾಲ್ಲೂಕು ಕ್ರೀಡಾಂಗಣ ಕಾಮಗಾರಿ ಕಳಪೆಯಾಗಿದ್ದು, ಸಂಬಂಧಿಸಿದವರು ತಕ್ಷಣ ಇದನ್ನು ಪೂರ್ಣ ಪ್ರಮಾಣದಲ್ಲಿ ಸಿದ್ಧಪಡಿಸಬೇಕು ಎಂದು ಶಾಸಕ ಡಿ. ಸುಧಾಕರ್ ತಾಕೀತು ಮಾಡಿದರು.ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡೆಗಳಲ್ಲಿ ಕ್ರೀಡಾಪಟುಗಳ ಕಳಪೆ ಸಾಧನೆ ಕುರಿತು ಎಲ್ಲರೂ ಮಾತನಾಡುತ್ತೇವೆ.ಕ್ರೀಡಾಪಟುಗಳಿಗೆ ಸೂಕ್ತವಾದ ತರಬೇತಿ ನೀಡಲು ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಬೇಕಿದೆ. ಪ್ರಾಥಮಿಕ- ಪ್ರೌಢ ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ ಎಂದು ಅವರು ತಿಳಿಸಿದರು.ದೈಹಿಕ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ವರ್ಷಗಳಿಂದ ನಾನಾ ರೀತಿಯ ಧರಣಿ, ಸತ್ಯಾಗ್ರಹ ನಡೆಸುತ್ತಾ ಬಂದಿದ್ದಾರೆ. ಬರುವ ಅಧಿವೇಶನದಲ್ಲಿ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಗಳ ಜತೆಗೂಡಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ಉತ್ತಮ ಕ್ರೀಡಾಪಟುಗಳನ್ನು ರೂಪಿಸುವ, ಶಾಲೆಗಳಲ್ಲಿ ಶಿಸ್ತು, ಶ್ರದ್ಧೆ, ಸ್ವಚ್ಛತೆ ಮೂಡಿಸುವ ಹೊಣೆ ದೈಹಿಕ ಶಿಕ್ಷಕರ ಮೇಲಿದೆ ಎಂದು ಸುಧಾಕರ್ ತಿಳಿಸಿದರು.ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವಿಜಯಮ್ಮ ಎಂ ಜಯಣ್ಣ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನುರಾಧಾ, ಪುರಸಭಾಧ್ಯಕ್ಷೆ ಮಂಜುಳಾ ವೆಂಕಟೇಶ್, ಜ್ಯೋತಿಲಕ್ಷ್ಮೀ ಗೋಪಿಯಾದವ್, ದ್ಯಾಮೇಗೌಡ, ಮಹಮದ್ ಫಕೃದ್ದೀನ್, ಲಕ್ಷ್ಮೀದೇವಮ್ಮ, ಎಚ್.ಆರ್. ತಿಮ್ಮಯ್ಯ, ಬಿ.ವಿ. ಮಾಧವ, ಎಂ. ರೇವಣಸಿದ್ದಪ್ಪ, ನಾಗಪ್ಪ, ಸಿ. ಶಿವಾನಂದ್, ಕೆ. ರಂಗಪ್ಪ, ರಾಜಣ್ಣ, ಚಮನ್‌ಷರೀಫ್ ಮತ್ತಿತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.