ಕ್ರೀಡಾಂಗಣ ಕಾಮಗಾರಿ ಶೀಘ್ರ

ಭಾನುವಾರ, ಮೇ 26, 2019
32 °C

ಕ್ರೀಡಾಂಗಣ ಕಾಮಗಾರಿ ಶೀಘ್ರ

Published:
Updated:

ಆಳಂದ: ಇಂದಿನ ಶಾಲಾ ಮಕ್ಕಳಿಗೆ ಪಾಠದ ಜೊತೆಗೆ ಆಟವು ಬಹಳ ಪ್ರಮುಖವಾಗಿದ್ದು. ಇದರಿಂದ ಸಂತುಲಿತ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಬರುವ ದಿನಗಳಲ್ಲಿ ಬಾಕಿಯಿರುವ ಕ್ರೀಡಾಂಗಣದ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸುಭಾಷ ಆರ್.ಗುತ್ತೇದಾರ ಹೇಳಿದರು.ಮಂಗಳವಾರ ಇಲ್ಲಿ ಹಮ್ಮಿಕೊಂಡ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕ್ರೀಡಾಂಗಣದ ಸುತ್ತ ಗಿಡಮರ ಬೆಳೆಸಿ ಸುಂದರಗೊಳಿಸುವ ಯೋಜನೆ ಹೊಂದಲಾಗಿದೆ ಎಂದು ಹೇಳಿದರು.ದಸ್ತಗೀರ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಕರಿಂದ ಪಥಸಂಚಲನ ನಡೆಯಿತು. ಪಾರಿವಾಳಗಳನ್ನು ಶಾಸಕರು ಹಾರಿಸಿ ಬಿಡುವುದರ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು.ಶಂಕರ ದೇಸಾಯಿ ಕಲ್ಲೂರು ಪ್ರಾರ್ಥನಾ ಗೀತೆ ಹಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಮೃತ ಪಟ್ಟಣಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಕಾಮಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ಪಾಟೀಲ್, ಸೇರಿದಂತೆ ತಾಲ್ಲೂಕಿನ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಭಾಗವಹಿಸಿದ್ದರು.

ಕೆ.ಬಸವರಾಜ ನಿರೂಪಿಸಿದರು. ಶ್ರೀಶೈಲ ಬಬಲಾದ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry