ಸೋಮವಾರಪೇಟೆ: ಸ್ಥಳೀಯ ಕ್ರೀಡಾಭಿಮಾನಿಗಳ ಬಹುದಿನಗಳ ಕನಸಾದ ಸಿಂಥೆಟಿಕ್ ಟರ್ಫ್ ಕ್ರೀಡಾಂಗಣ ನಿರ್ಮಾಣ ಯೋಜನೆಯನ್ನು ಬೇರೆಡೆ ಸ್ಥಳಾಂತರಿಸಲು ಕೆಲವರು ಷಡ್ಯಂತ್ರ ನಡೆಸುತ್ತಿರುವುದನ್ನು ಸೋಮವಾರಪೇಟೆ ಸ್ಪೋರ್ಟ್ಸ್ ಕ್ಲಬ್ ತೀವ್ರವಾಗಿ ವಿರೋಧಿಸಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಚ್.ಎನ್.ಅಶೋಕ್ ಮಾತನಾಡಿ ಸಚಿವ ಅಪ್ಪಚ್ಚು ರಂಜನ್ ಅವರು ತಾವು ನೀಡಿದ ಭರವಸೆಯಂತೆಯೇ ಕ್ರೀಡಾಂಗಣವನ್ನು ತಾಲೂಕು ಕೇಂದ್ರವಾದ ಸೋಮವಾರಪೇಟೆಯಲ್ಲೇ ನಿರ್ಮಿಸಬೇಕು ಎಂದು ಮನವಿ ಮಾಡಿರುವುದಾಗಿ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಟರ್ಫ್ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಸರ್ವೆ ಕಾರ್ಯ ನಡೆಸಲಾಗಿದ್ದು ಸಚಿವರ ಭರವಸೆ ಹುಸಿಯಾಗಬಾರದು ಎಂದು ಹೇಳಿದರು.

ಒಂದು ವೇಳೆ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳಾವಕಾಶದ ಕೊರತೆ ಎದುರಾದರೆ ಬ್ಯಾಸ್ಕೆಟ್ಬಾಲ್ ಹಾಗೂ ಅಪ್ರಯೋಜಕವಾಗಿರುವ ಸ್ಟೇಡಿಯಂ ಅನ್ನು ಮೈದಾನದಿಂದ ತೆರವುಗೊಳಿಸಿ ಕ್ರೀಡಾಂಗಣದ ವಿಸ್ತೀರ್ಣವನ್ನು ಹೆಚ್ಚಿಸಬಹುದು. ಜತೆಗೆ ಕ್ರೀಡಾ ವಸತಿ ಶಾಲೆಯನ್ನು ಸಹ ಈಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿಯ ಖಾಲಿ ಜಾಗದಲ್ಲಿ ನಿರ್ಮಿಸಬಹುದು ಎಂದು ತಿಳಿಸಿದರು.

ಕೆಲವರು ಕ್ರೀಡಾಂಗಣ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿರುವುದು ಖಂಡನೀಯ. ಒಂದು ವೇಳೆ ಬೇರೆಡೆ ಕ್ರೀಡಾಂಗಣ ನಿರ್ಮಿಸಲು ಮುಂದಾದರೆ ಕ್ರೀಡಾಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳ ನೆರವಿನೊಂದಿಗೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.ಗೋಷ್ಠಿಯಲ್ಲಿ ಕ್ಲಬ್ನ ಪದಾಧಿಕಾರಿಗಳಾದ ಬಿ.ಎಸ್.ರವಿಚಂದ್ರ, ಸಜನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.