ಸೋಮವಾರ, ಮಾರ್ಚ್ 1, 2021
23 °C

ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಪ್ರಥಮ ಪಿಯುಸಿಯಿಂದ ಸ್ನಾತ್ತಕೋತ್ತರ ಪದವಿ (ವೃತ್ತಿಪರ ಕೋರ್ಸ್‌ಗಳನ್ನೊಳಗೊಂಡಂತೆ) ಯಲ್ಲಿ ಕಲಿಯುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜು ಗಳ ಕ್ರೀಡಾ ವಿದ್ಯಾರ್ಥಿಗಳು ಈ ಯೋಜ ನೆಯ ಪ್ರಯೋಜನ ಪಡೆಯಬಹುದು. ಅಂತರರಾಷ್ಟ್ರೀಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ವಿಜೇತರಾದವರು ಹಾಗೂ ಅಂಕವಿಕಲ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.



ಅರ್ಹ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಇಲ್ಲಿಂದ ಅರ್ಜಿ ಪಡೆದು, ದೃಢೀಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್‌ 20ರೊಳಗೆ ಇಲ್ಲಿಗೆ ಸಲ್ಲಿಸಬೇಕು. ಮಾಹಿತಿಗೆ 0820– 2521 324 .

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.