ಬುಧವಾರ, ಮೇ 19, 2021
27 °C

ಕ್ರೀಡಾಪಟುಗಳಿಗೆ ನೆರವು: ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ರೀಡಾಪಟುಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮುಂದಿನ ಬಜೆಟ್‌ನಲ್ಲಿ ಕ್ರೀಡೆಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಮಂಗಳವಾರ ಹೇಳಿದರು.

ಕ್ರೀಡಾಪಟುಗಳ ಪರವಾಗಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಮಂಡಿಸಿದ ವಿವಿಧ ಬೇಡಿಕೆಗಳ ಮನವಿಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.ಆರ್ಥಿಕ ಸಂಕಷ್ಟದಲ್ಲಿ ಇರುವ ಕುಸ್ತಿಪಟುಗಳು ಮತ್ತು ಮಾಜಿ ಕ್ರೀಡಾಪಟುಗಳಿಗೆ ಹಾಗೂ ರಾಜ್ಯ ಮತ್ತು ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ನೀಡುವ ಮಾಸಾಶನವನ್ನು ಹೆಚ್ಚಿಸುವ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೂವರು ಅಂಗವಿಕಲ ಕ್ರೀಡಾಪಟುಗಳಿಗೆ ಕೂಡಲೇ ನಗದು ಪುರಸ್ಕಾರ ನೀಡಲಾಗುವುದು. ಚಿನ್ನದ ಸಾಧನೆ ಮಾಡಿದವರಿಗೆ ರೂ 2.50 ಲಕ್ಷ, ಬೆಳ್ಳಿಗೆ ರೂ 1.75 ಲಕ್ಷ ಮತ್ತು ಕಂಚು ಗೆದ್ದವರಿಗೆ ರೂ 1.25 ಲಕ್ಷ ನಗದು ಪುರಸ್ಕಾರ ನೀಡಲಾಗುವುದು ಎಂದರು.ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ನೆರೆ ರಾಜ್ಯಗಳಲ್ಲಿ ನಿವೇಶನ ಒದಗಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ನಿವೇಶನಕ್ಕೆ ಸರಿ ಸಮಾನವಾಗಿ ನಗದು ಪುರಸ್ಕಾರ ನೀಡಲಾಗುವುದು ಮತ್ತು ಕ್ರೀಡಾ ಪಟುಗಳ ವಲಸೆಯನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶೇಖರ್ ಅವರ ಇನ್ನುಳಿದ ಬೇಡಿಕೆಗಳಿಗೆ ಸಿಎಂ ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.