ಶುಕ್ರವಾರ, ಮೇ 27, 2022
31 °C

ಕ್ರೀಡಾ ಅಭಿವೃದ್ಧಿಗೆ ಕರವೇ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಪ್ರದೇಶದ ಕ್ರೀಡಾ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಿರುವ  ಸರ್ಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆಯ( ಪ್ರವೀಣ ಶೆಟ್ಟಿ )ಬಣ ತೀವ್ರವಾಗಿ ಖಂಡಿಸಿದೆ.ಗ್ರಾಮೀಣ ಭಾಗದಲ್ಲಿ ಹಲವು ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಕ್ರೀಡಾ ಸೌಲಭ್ಯದ ಕೊರತೆಯಿಂದ ಹಲವು ಪ್ರತಿಭೆಗಳು ಬೆಳೆಯುವ ಹಂತದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ. ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದ ಕ್ರೀಡೆಯಿಂದ ವಂಚಿತರಾಗುವಂಥ ವಾತಾವರಣವೂ ಈ ಭಾಗದ ಕ್ರೀಡಾಪಟುಗಳುಲ್ಲಿ ನಿರ್ಮಾಣವಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯ ಸರ್ಕಾರ ದಕ್ಷಿಣ ಕರ್ನಾಟಕಕ್ಕೆ ನೀಡುತ್ತಿರುವ ಕ್ರೀಡಾ ಸವಲತ್ತುಗಳನ್ನು ಹೈದರಾಬಾದ್ ಕರ್ನಾಟಕ್ಕೆ ನೀಡಿದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ವಿಭಾಗೀಯ ಕೇಂದ್ರದಲ್ಲಿರುವ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ನಿರ್ಮಾಣಕ್ಕೆ ಕಾಮಗಾರಿ ಪ್ರತಿಯಲ್ಲಿದೆ ಆದರೂ, ಕ್ರೀಡಾಂಗಣದ ಮೇಲುಸ್ತುವಾರಿಗಾಗಿ ಕಡಿಮೆ ಪ್ರಮಾಣದ ಅನುದಾನ ನೀಡುತ್ತಿರುವುದು ನಿರ್ಲಕ್ಷ್ಯದ ಪರಮಾವಧಿಯೇ ಆಗಿದೆ ಎಂದು ಹೇಳಿದರು.ಕ್ರೀಡಾಂಗಣದ ಒಳ ಹಾಗೂ ಹೊರಾಂಗಣ ಕ್ರೀಡೆಗಳನ್ನು ಯಶಸ್ವಿಗೊಳಿಸಲು ಪ್ರತಿ ವರ್ಷವೂ 2ಲಕ್ಷಕ್ಕೂ ಅಧಿಕ ಅನುದಾನವನ್ನು ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿರುವ ಕ್ರೀಡಾಂಗಣ ವ್ಯವಸ್ಥೆ ಸಂಪೂರ್ಣ ಹಾಳಾಗಿವೆ. ನಿರ್ವಹಣೆ ಇಲ್ಲದೆ ಪಾಳು ಬೀಳುತ್ತಿವೆ. ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ವ್ಯವಸ್ಥಿತ ನೀಲನಕ್ಷೆ ತಯಾರಿಸಿ ಕ್ರೀಡಾಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಬೇಕು. ಜಿಲ್ಲಾ ಪಂಚಾಯಿತಿ ಅನುದಾನದಿಂದ ಈ  ಜಿಲ್ಲೆಯಲ್ಲಿರುವ ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಆಡಳಿತ ಕ್ರಮ ತೆಗೆದುಕೊಳ್ಳುವಂತೆ ಕರವೇ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಸುಮಾರು 131ಕ್ಕೂ ಹೆಚ್ಚು ದೈಹಿಕ ಶಿಕ್ಷಕರ ಹುದ್ದೆಗಳು ಕಾಲಿ ಇವೆ. ಇವುಗಳನ್ನು ಭರ್ತಿ ಮಾಡುವ ಮೂಲಕ ಈ ಭಾಗದ ಕ್ರೀಡಾ ಚಟುವಟಿಕೆಗೆ ಹೆಚ್ಚು ಒತ್ತು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.