`ಕ್ರೀಡಾ ಜಾಗೃತಿ ಮೂಡಿಸಿ'

7

`ಕ್ರೀಡಾ ಜಾಗೃತಿ ಮೂಡಿಸಿ'

Published:
Updated:

ಬೀದರ್: ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಮಹಾ ವಿದ್ಯಾಲಯ ವಿದ್ಯಾರ್ಥಿಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ ದೊರಕಿತು.ಪದವಿಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಂತೋಷಮ್ಮಾ ಕೌಡ್ಯಾಳ್ ಉದ್ಘಾಟಿಸಿದರು. ಯುವಕರು ಕ್ರೀಡೆಗಳ ಬಗೆಗೆ ಆಸಕ್ತಿ ಬೆಳೆಸಿಕೊಂಡು, ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಸಲಹೆ ಮಾಡಿದರು.ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ, ವಿದ್ಯಾರ್ಥಿಗಳು ಆತ್ಮವಿಶ್ವಾಸದೊಂದಿಗೆ ಕ್ರೀಡೆಗಳಲ್ಲಿ ಪಾಲ್ಗೊಂಡು ಗೆಲುವು ಸಾಧಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.ಕ್ರೀಡೆಗಳಲ್ಲಿ ಭಾಗವಹಿಸುವವರ ಸಂಖ್ಯೆ ಹೆಚ್ಚಾಗಬೇಕು. ಕ್ರೀಡಾಸಕ್ತ ಯುವಕರನ್ನು ಪ್ರೋತ್ಸಾಹಿಸಲು ಒಳಾಂಗಣ ಕ್ರೀಡಾಂಗಣ, ಟೆನಿಸ್ ಕೋರ್ಟ್ ನಿರ್ಮಿಸಲಾಗಿದೆ.ಆಸಕ್ತರು ಇವುಗಳ ಸದುಪಯೋಗ ಪಡೆಯಬೇಕು.  ಇಲಾಖೆ ಈ ನಿಟ್ಟಿನಲ್ಲಿ ಗಮನ ಹರಿಸಬೆಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ತ್ಯಾಗರಾಜನ್ ಹೇಳಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಕೆ. ಗಾದಗೆ, ಕ್ರೀಡಾಕೂಟದ ಸಂಚಾಲಕ ಮಾನಕಾರೆ ರಾಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜೆ.ಎಸ್. ಕ್ಷೀರಸಾಗರ್, ಎನ್.ಎಫ್. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎ. ಸಿಮಿಯೋನ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ ಕಣಜೆ, ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಕೆ. ವಾಘಮಾರೆ, ಕಾರ್ಯದರ್ಶಿ ಶಿವರಾಜ ಪಾಟೀಲ್, ಉಪನ್ಯಾಸಕರ ಸಂಘದ ಅಧ್ಯಕ್ಷ ಉಮೇಶ್ ಅಷ್ಟಗಿ ಉಪಸ್ಥಿತರಿದ್ದರು. ಎನ್.ಎಫ್. ಪದವಿಪೂರ್ವ ಕಾಲೇಜು ಪ್ರಾಚಾರ್ಯ ನಳೀನ್‌ಕುಮಾರ್ ಸ್ವಾಗತಿಸಿದರು.ವಿವಿಧ ತಾಲ್ಲೂಕುಗಳ ಸುಮಾರು 50ಕ್ಕೂ ಅಧಿಕ ಪದವಿಪೂರ್ವ ಕಾಲೇಜುಗಳ ವಾಲಿಬಾಲ್, ಕಬಡ್ಡಿ, ಕೊಕ್ಕೋ, ಫುಟ್‌ಬಾಲ್, ಹಾಕಿ, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಕ್ರೀಡೆಗಳ ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿವೆ.

ಕ್ರೀಡಾಕೂಟ ಬುಧವಾರ ಸೆಪ್ಟೆಂಬರ್ 4ರಂದು ಅಂತ್ಯವಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry