ಗುರುವಾರ , ಜೂನ್ 17, 2021
29 °C

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಇದನ್ನು ಅರಿತು ಕ್ರೀಡಾಪಟುಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು  ಶಾಸಕ ಹಾಗೂ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಹೇಳಿದರು.ಇಲ್ಲಿನ ಎಕ್ಸ್ ಕಾಲೇಜ್ ಬಾಯ್ಸ ವತಿಯಿಂದ  ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ  ಭಗತ್ ಸಿಂಗ್ ಟ್ರೋಫಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದರು.ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಕಾರಿಯಾಗಲಿವೆ. ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಕ್ರೀಡಾ ಸ್ಪೂರ್ತಿಯೊಂದಿಗೆ ಸ್ವೀಕರಿಸಬೇಕು ಎಂದರು. ರೇಷ್ಮೆ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ,ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಉಪಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವತ್ಥ ನಾರಾಯಣಕುಮಾರ್, ನಗರ ಬಿಜೆಪಿ ಅಧ್ಯಕ್ಷ ಆರ್.ಗೋಪಿ, ಕಾರ್ಯದರ್ಶಿ ಸತ್ಯನಾರಾಯಣ್,ಖಜಾಂಚಿ ಪುಟ್ಟಲಿಂಗಪ್ಪ, ಬೆಂ.ಗ್ರಾ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮೋಹನ್‌ಕುಮಾರ್, ದರ್ಗಾಜೋಗಿಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ತಿಮ್ಮರಾಜು, ನಗರ ಸಭಾ ಸದಸ್ಯ ನಂಜಪ್ಪ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.