ಮಂಗಳವಾರ, ಏಪ್ರಿಲ್ 13, 2021
32 °C

ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಕ್ರೀಡಾ ವಸತಿ ಶಾಲೆಯನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ.ಉದಾಸಿ ಬುಧವಾರ ಉದ್ಘಾಟಿಸಿದರು.ಅಥ್ಲೆಟಿಕ್ಸ್ ಹಾಗೂ ಹಾಕಿ ಕ್ರೀಡಾ ತರಬೇತಿಗೆ ಆಯ್ಕೆಯಾಗುವ 50 ವಿದ್ಯಾರ್ಥಿಗಳಿಗೆ ಈ ವಸತಿ ನಿಲಯದಲ್ಲಿ ವಾಸ್ತವ್ಯ ವ್ಯವಸ್ಥೆ ಇದ್ದು, ಕ್ರೀಡಾ ತರಬೇತಿಗಾಗಿ ಪ್ರಸಕ್ತ ವರ್ಷ 12 ಬಾಲಕಿಯರು ಹಾಗೂ 26 ಬಾಲಕರು ಪ್ರವೇಶ ಪಡೆದಿದ್ದಾರೆ.  ಊಟ ಹಾಗೂ ವಾಸ್ತವ್ಯದ ವ್ಯವಸ್ಥೆ ನೀಡಲಾಗುವುದು ಎಂದು ಜಿಲ್ಲಾ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೆ.ಮುತ್ತುಕಾಮಾಚಿ ತಿಳಿಸಿದರು.ಇದೇ ಸಂದರ್ಭದಲ್ಲಿ ಕ್ರೀಡಾ ವಸತಿ ನಿಲಯದಲ್ಲಿ ಕುಮಾರಪಟ್ಟಣಂನ ಆದಿತ್ಯ ಬಿರ್ಲಾ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗೋವಿಂದ ಮೆಹಂದಳೆ ಅವರ ಫ್ಯಾಬ್ರಿಕ್ ಪೇಟಿಂಗ್‌ನಲ್ಲಿ ಚಿತ್ರಿಸಿದ ಸ್ವಾತಂತ್ರ್ಯ ಹೋರಾಟಗಾರರ  ಚಿತ್ರಗಳ ಪ್ರದರ್ಶನವನ್ನು   ಉದಾಸಿ ಉದ್ಘಾಟಿಸಿದರು.ಪ್ರದರ್ಶನದಲ್ಲಿ 1857 ರಿಂದ 1947ರವರೆಗಿನ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಗೋಪಾಲಕೃಷ್ಣ ಗೋಖಲೆ, ಗಾಂಧೀಜಿ, ಲಾಲ್-ಬಾಲ್-ಪಾಲ್, ಭಗತ್‌ಸಿಂಗ್, ರಾಜಗುರು ಹಾಗೂ ಸುಖದೇವ, ವೀರಸಾವರ್ಕರ್ ಮತ್ತು ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳಾದ ಮಹದೇವ ಮೈಲಾರ, ತಿಕರಪ್ಪ ಮಡಿವಾಳರ, ವೀರಯ್ಯ ಹಿರೇಮಠ ಹಾಗೂ ಮೆಣಸಿನಹಾಳು ತಿಮ್ಮನಗೌಡರು ಸೇರಿದಂತೆ 66 ಸ್ವಾತಂತ್ರ್ಯ ಯೋಧರ ಚಿತ್ರಗಳು ಪ್ರದರ್ಶನದಲ್ಲಿದ್ದವು.ಶಾಸಕ ನೆಹರೂ ಓಲೇಕಾರ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಾ ತಳವಾರ, ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನಸಿಂಗ್ ರಾಠೋರ್, ಜಿ.ಪಂ. ಸಿಇಒ ಉಮೇಶ ಕುಸುಗಲ್  ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.