ಗುರುವಾರ , ಮೇ 6, 2021
31 °C

ಕ್ರೀಡಾ ಸಾಧಕರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಗೇರಿ: ಇಲ್ಲಿನ ಭುವನೇಶ್ವರಿ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿದ್ದ 30ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕೆಂಗೇರಿ ಉಪನಗರದ ಮಾರುತಿ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ 11 ಅಂಗವಿಕಲ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.

 

ಅಂಗವಿಕಲರು ಪ್ರತಿಯೊಂದು ರಂಗದಲ್ಲೂ ಸಾಧನೆಗಳ ಮೆಟ್ಟಿಲುಗಳನ್ನು ಏರುತ್ತಾ ಸಾಮಾನ್ಯ ಜನರಿಗೆ ಅಚ್ಚರಿ ಹುಟ್ಟಿಸುವಂತೆ ಸ್ಪರ್ಧೆಗಳಲ್ಲಿ ಪೈಪೋಟಿ ನೀಡುತ್ತಿರುವುದು ಅವರಲ್ಲಿರುವ ಅಂಗವಿಕಲತೆಯನ್ನು ಮರೆಯುವಂತೆ ಮಾಡುತ್ತಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ,ಎಂದರು.ಕಂಠೀರವ ಸ್ಟುಡಿಯೊ ಅಧ್ಯಕ್ಷ ಎಂ.ರುದ್ರೇಶ್, ಪಾಲಿಕೆ ಸದಸ್ಯರಾದ ರಾ.ಆಂಜನಪ್ಪ, ವೀಣಾ ನಾಗರಾಜ್, ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಪ್ರಕಾಶ್, ಯುವ ಮೋರ್ಚಾ ಅಧ್ಯಕ್ಷ ಜೆ.ರಮೇಶ್, ಬಿಜೆಪಿ ಮುಖಂಡರಾದ ವಿ.ವಿ.ಸತ್ಯನಾರಾಯಣ್, ರಾಜಣ್ಣ, ಜಯರಾಮೇಗೌಡ, ಲಕ್ಷ್ಮಯ್ಯ ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.