ಶುಕ್ರವಾರ, ಮೇ 14, 2021
30 °C

ಕ್ರೀಡೆಗಳಲ್ಲಿ ಭಾಗವಹಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಗುಂದ: ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸಿರಲು ಸಾಧ್ಯವಿದೆ. ಆದ್ದರಿಂದ ಮಕ್ಕಳೇ ಆರೋಗ್ಯವಂತರಾಗಿರಲು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಪಾಟೀಲ ಸಲಹೆ ನೀಡಿದರು.ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ತಾಲ್ಲೂಕು ಘಟಕದ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ದಿನಗಳಲ್ಲಿ ದೇಶಿಯ ಕ್ರೀಡೆಗಳು ನಿರ್ಲಕ್ಷ್ಯಕ್ಕೊಳಗಾಗುತ್ತಿವೆ. ಆದ್ದರಿಂದ ಅವುಗಳಿಗೆ  ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ಯುವಕರು ಕ್ರೀಡಾಸಕ್ತಿ  ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಸಾರ್ವಜನಿಕ ಶಿಕ್ಷಣ  ಇಲಾಖೆ ಉಪನಿರ್ದೇಶಕ ಉದಯ ನಾಯಕ ಮಾತನಾಡಿ `ಕ್ರೀಡಾ ಪಟುಗಳಾದರೆ,  ಬಹುಮಾನ ಪಡೆ ಯುವ ಮೂಲಕ ದೇಶದಲ್ಲಿ ಉತ್ತಮ ಹೆಸರು ಮಾಡಲು ಸಾಧ್ಯವಿದೆ. ಆದ್ದರಿಂದ ಶಿಕ್ಷಕರು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸ ಬೇಕು ಎಂದರು.ತಾಪಂ ಅಧ್ಯಕ್ಷ ಮಲ್ಲಪ್ಪ ಮೇಟಿ ಮಾತನಾಡಿದರು. ಶಾಂತವ್ವ ದಂಡಿನ, ತಾಪಂ ಉಪಾಧ್ಯಕ್ಷೆ  ಪಾರವ್ವ ಹಡಗಲಿ, ಎಪಿಎಂಸಿ ಅಧ್ಯಕ್ಷ ಸಿ.ಎಸ್.ಪಾಟೀಲ, ಚಂದ್ರು ದಂಡಿನ,  ಪುರಸಭೆ ಅಧ್ಯಕ್ಷೆ ಮೆಹಬೂಬಿ ಮಟಗೇರ, ಬಿ.ಬಿ.ಐನಾಪೂರ, ಕೆ.ಬಿ.ಅರಕೇರಿ, ಎಸ್.ಬಿ.ಮಲ್ಲಾಡ, ವಿ.ಎನ್.ಭೋಸಲೆ, ಎಂ.ಎ. ಫಣಿಬಂದ ಹಾಜರಿದ್ದರು. ಬಿ.ಆರ್.ಪಾಟೀಲ ಹಾಗೂ ಎಚ್.ಎಸ್. ಬೆಳಕೊಪ್ಪ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರುಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಂ. ಉಕ್ಕಲಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.