`ಕ್ರೀಡೆಗಳಿಂದ ಮಕ್ಕಳ ಮನಸ್ಸು ಸದೃಢ'

7

`ಕ್ರೀಡೆಗಳಿಂದ ಮಕ್ಕಳ ಮನಸ್ಸು ಸದೃಢ'

Published:
Updated:

ಮಹದೇವಪುರ: `ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕವಾಗಿ ಸಾಕಷ್ಟು ಸದೃಢರಾಗುತ್ತಾರೆ' ಎಂದು ಮಾಜಿ ಅಥ್ಲೀಟ್ ಡಾ.ಎಸ್.ಮಾಲತಿ ಅಭಿಪ್ರಾಯಪಟ್ಟರು.



ಇಲ್ಲಿನ ಭೈರತಿ ಗ್ರಾಮದಲ್ಲಿ ಈಚೆಗೆ ನಡೆದ ನ್ಯೂ ಬಾಲ್ಡ್‌ವಿನ್ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.



`ಕ್ರೀಡೆಯಲ್ಲಿ ತೊಡಗುವುದರಿಂದ ಮಕ್ಕಳ ಆರೋಗ್ಯ ಚೆನ್ನಾಗಿರುತ್ತದೆ. ಬಹುಮುಖ್ಯವಾಗಿ ಅವರ ಬುದ್ಧಿಮಟ್ಟ ಹೆಚ್ಚುತ್ತದೆ' ಎಂದು ಹೇಳಿದರು.



ಅಧ್ಯಕ್ಷತೆ ವಹಿಸಿದ್ದ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಆಂಜನಪ್ಪ ಮಾತನಾಡಿ, `ನ್ಯೂ ಬಾಲ್ಡ್‌ವಿನ್ ಶಾಲೆಯಲ್ಲಿ ಮಕ್ಕಳಿಗೆ ಪಾಠದೊಂದಿಗೆ ಆಟಕ್ಕೂ ಸಮನಾಗಿ ಪ್ರಾಮುಖ್ಯತೆ ನೀಡಿ ತರಬೇತಿ ನೀಡಲಾಗುತ್ತಿದೆ. ಇದು ಉತ್ತಮ ಬೆಳವಣಿಗೆ' ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.



ಸಚಿವರ ಭರವಸೆ

ಹೊಸಕೋಟೆ: `ತಾಲ್ಲೂಕಿನ ಸೂಲಿಬೆಲೆ ಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಜಗಜೀವನರಾಮ್ ಭವನ ನಿರ್ಮಿಸಲಾಗುವುದು' ಎಂದು ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.



ಅಟಲ್‌ಜಿ ಜನಸ್ನೇಹಿ ಕೇಂದ್ರ ಸೇರಿದಂತೆ ಸೂಲಿಬೆಲೆ ಗ್ರಾಮದಲ್ಲಿ ವಿವಿಧ ಯೋಜನೆಗಳ ಅಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಉದ್ಘಾಟಿಸಿ  ಮಾತನಾಡಿದರು.  ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್, ಮುಖಂಡರಾದ ಬಿ.ಎನ್. ಗೋಪಾಲಗೌಡ ಮತ್ತಿತರರು  ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry