ಕ್ರೀಡೆಯಲ್ಲಿ ಸೋಲು ಗೆಲುವು ಸಹಜ

7

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ

Published:
Updated:
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ

ಹಟ್ಟಿ ಚಿನ್ನದ ಗಣಿ: ಪ್ರತಿಯೊಬ್ಬರ ಜೀವನದಲ್ಲಿ ಸೋಲು ಗೆಲುವು ಹೇಗೆ ಸಮಾನವಾಗರುತ್ತವೆಯೋ ಅದರಂತೆ ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋಲನ್ನು ಮೆಟ್ಟಿ ನಿಂತಾಗ ಮಾತ್ರ ಗೆಲುವನ್ನು ಸಾಧಿಸಬಹುದೆಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.ಸೋಮವಾರದಂದು ಸ್ಥಳೀಯ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲ್ಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಸಿ ಮಾತನಾಡಿದ ಅವರು, ವಲಯ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಹೋಬಳಿಯ ಕೀರ್ತಿಯನ್ನು ತರುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಹುರಿತುಂಬಿಸಬೇಕು. ಅದಕ್ಕಾಗಿ ದೈಹಿಕ ಶಿಕ್ಷಕರು ಮಕ್ಕಳಿಗೆ  ಉತ್ತಮವಾಗಿ ತರಬೇತಿ ನೀಡಬೇಕೆಂದು ಸಲಹೆ ನೀಡಿದರು.ಕ್ರೀಡಾಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿದ ಹಟ್ಟಿ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ಕೊಳ್ಳ, ಕ್ರೀಡಾಕೂಟಗಳು ಪರಸ್ಪರರಲ್ಲಿ ಸಹೋದರತ್ವದ

ವೇದಿಕೆಯ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಖಾನಾಪುರ, ಉಪಾಧ್ಯಕ್ಷೆ ಶಾರದಾ ಪಾಟೀಲ್, ತಾಲ್ಲೂಕು ಪಂಚಾಯತಿ ಸದಸ್ಯೆ ಬಸಮ್ಮ, ಸಂಘದ ಅಧ್ಯಕ್ಷ ನಾಗರೆಡ್ಡಿ,  ಸಿ.ಆರ್.ಸಿ ಬಸವರಾಜ ಕರಡಿ, ಮೊದಲಾದವರು ಉಪಸ್ಥಿತರಿದ್ದರು.ಕ್ರೀಡಾಪಟುಗಳಿಗೆ ಶಿಕ್ಷಕ ಮೂಲಿಮನಿ ಪ್ರಮಾಣವಚನ ಬೋಧಿಸಿದರು. ಅಮರೇಶ ಸ್ವಾಗತಿಸಿದರು. ಶಿಕ್ಷಕ ಆನಂದ ನಿರೂಪಿಸಿದರು. ವೆಂಕಟೇಶ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry