ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ದಸರಾ ಕ್ರೀಡಾಕೂಟಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಮಾತನಾಡಿ `ಈ ಸ್ಪರ್ಧೆಗಳಿಗೆ ವಯಸ್ಸಿನ ಮಿತಿಯಿಲ್ಲ. ದಸರಾ ಕ್ರೀಡಾಕೂಟದಲ್ಲಿ ಪಡೆಯುವ ಪ್ರಮಾಣಪತ್ರವು ಶೈಕ್ಷಣಿಕ ಕೋರ್ಸ್ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶಾವಕಾಶ ಪಡೆಯಲು ಸಹಕಾರಿಯಾಗಲಿದೆ~ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.