ಸೋಮವಾರ, ಮೇ 17, 2021
21 °C

ಕ್ರೀಡೆ, ಎನ್‌ಎಸ್‌ಎಸ್ ಚಟುವಟಿಕೆಗೆ ಶಾಸಕ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ನಗರ: `ದೇವರ ಮೇಲೆ ನಂಬಿಕೆ ಇಟ್ಟು ಮುಂದಿಟ್ಟ ಹೆಜ್ಜೆ ಹಿಂದೆ ಇಡಬಾರದು~ ಎಂದು ಶಾಸಕ ಸಾ.ರಾ.ಮಹೇಶ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಕ್ರೀಡೆ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಚಟುವಟಿಕೆಗಳ ಸಮಾರೋಪ ಸಮಾ ರಂಭ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ನಿರ್ಧಾರ ತೆಗೆದು ಕೊಳ್ಳುವ ಮುನ್ನ ಹತ್ತಾರು ಬಾರಿ ಯೋಚಿಸಬೇಕು. ಓದಿನೊಂದಿಗೆ ದೇಹ ದಂಡಿಸುವ ಕೆಲಸವಾಗಬೇಕು. ಕಾಲೇಜಿ ನಲ್ಲಿ ಉತ್ತಮ ಶೈಕ್ಷಣಿಕ ವಾತಾವರ ಣವಿದ್ದು, ಉಪನ್ಯಾಸಕರು ಸಣ್ಣಪುಟ್ಟ ಸಮಸ್ಯೆ ದೊಡ್ಡದಾಗಿ ಮಾಡಬಾರದು ಎಂದರು.ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸಿದ್ದರಾಮೇಗೌಡ ಅವರನ್ನು ಸನ್ಮಾನಿಸಲಾಯಿತು.ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ರುದ್ರಯ್ಯ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಸಿದ್ದರಾಮೇಗೌಡ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ್, ಪ್ರಾಂಶುಪಾಲ ಎಸ್.ಶ್ರಿರಾಮ್, ಕ್ರೀಡಾ ವಿಭಾಗದ ಮೇಲ್ವಿಚಾರಕ ಎಚ್.ಎನ್. ಈಶಕುಮಾರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಕೆ.ಸಿ.ವೀರಭದ್ರಯ್ಯ, ಎನ್‌ಸಿಸಿ ಅಧಿಕಾರಿ ಮೇಜರ್ ಸಿ.ಪಿ.ಮಹದೇವಸ್ವಾಮಿ, ಎನ್‌ಎಸ್‌ಎಸ್ ಅಧಿಕಾರಿಗಳಾದ ಎಸ್.ಹರೀಶ್‌ಕುಮಾರ್, ಚಂದ್ರಕಲಾ, ಕನ್ನಡ ಸಹಾಯಕ ಪ್ರಾಧ್ಯಪಾಕ ಹರೀಶ್‌ಗೌಡ, ಅಥಿತಿ ಉಪನ್ಯಾಸಕ ಕೆ.ಎಲ್.ರಮೇಶ್, ಯೋಗೀಶ್, ಕೆ.ಆರ್.ಪ್ರತಿಮಾ, ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.