ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ತಂಡಗಳು

7
ವಾಲಿಬಾಲ್‌

ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ತಂಡಗಳು

Published:
Updated:

ಬೆಂಗಳೂರು: ಕರ್ನಾಟಕ ಬಾಲಕ ಮತ್ತು ಬಾಲಕಿಯರ ತಂಡ ಡೆಹ್ರಾಡೂನ್‌ನಲ್ಲಿ ನಡೆಯುತ್ತಿರುವ 40ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ ಷಿಪ್‌ನಲ್ಲಿ ಕ್ವಾರ್ಟರ್ ಫೈನಲ್‌ ಪ್ರವೇಶಿಸಿವೆ.ಶನಿವಾರ ನಡೆದ ಬಾಲಕರ ವಿಭಾಗದ ಪಂದ್ಯದಲ್ಲಿ ಕರ್ನಾಟಕ 25–16, 28–26, 20–25, 26–24ರಲ್ಲಿ ಉತ್ತರ ಪ್ರದೇಶ ತಂಡವನ್ನು ಮಣಿಸಿತು. ಇದರೊಂ ದಿಗೆ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದ ತಂಡ ಎಂಟರಘಟ್ಟಕ್ಕೆ ಲಗ್ಗೆ ಇಟ್ಟಿತು.ಬಾಲಕಿಯರ ವಿಭಾಗದ ದಿನದ ಮೊದಲ ಪಂದ್ಯದಲ್ಲಿ  ಕರ್ನಾಟಕ 25–08, 25–04, 25–05ರಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ನಿರಾಯಾಸವಾಗಿ ಪರಾಭವಗೊಳಿಸಿತು.ಈ ಜಯದೊಂದಿಗೆ ಗುಂಪಿನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry