ಬೆಂಗಳೂರು: ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಉದ್ದೇಶದ ಮಸೂದೆಗೆ ತಕರಾರು ಎತ್ತಿ ಗೊಂದಲ ಉಂಟು ಮಾಡಿರುವುದಕ್ಕಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.

`ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಯುಪಿಎ ಸರ್ಕಾರ ಮುಂದಾಗಿದೆ. ಇದರಿಂದ ಆ ಭಾಗದ ಜನರ ಬಹುದಿನಗಳ ಕನಸು ನನಸಾಗಲಿದೆ. ಇಂತಹ ಸಂದರ್ಭದಲ್ಲಿ ಮಸೂದೆಯ ಬಗ್ಗೆ ಆಕ್ಷೇಪ ಎತ್ತುವ ಮೂಲಕ ಆ ಭಾಗದ ಜನರ ಹಿತಾಸಕ್ತಿಯನ್ನು ಬಲಿಕೊಡಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ' ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಆ ಭಾಗದ ಜನರ ಕೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಿಂದ ಶೆಟ್ಟರ್ ದಿಢೀರನೆ ನಿಲುವು ಬದಲಿಸಿ ಮಸೂದೆ ಅಂಗೀಕಾರಕ್ಕೆ ಸಮ್ಮತಿಸಿದ್ದಾರೆ ಎಂದು ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.