ಮಂಗಳವಾರ, ಮೇ 17, 2022
23 °C

ಕ್ಷಮೆ ಕೋರಲು ಸಿಎಂಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ನೆಪದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳು ಭಾರತ್ ಬಂದ್ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದ್ದಾರೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ರೇಸ್‌ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ಮಾಡಿದರು.



`ಬಂದ್ ನೆಪದಲ್ಲಿ ಬಸ್‌ಗೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ್ದ್ದಿದು, ಬೆಲೆ ಏರಿಕೆ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಬೇಕು. ಅದನ್ನು ದುರುಪಯೋಗಪಡಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರ ಪರವಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್ ಈಶ್ವರಪ್ಪ ಅವರು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಬೇಕು~ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



ಸಮಿತಿ ಅಧ್ಯಕ್ಷ ಟಿ.ಆರ್.ಶ್ರೀನಿವಾಸ್, ನಗರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಸ್.ಮನೋಹರ್, ಡಿ.ಎ.ಪ್ರಮೋದ್ ಶಂಕರ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.