ಮಂಗಳವಾರ, ಮೇ 11, 2021
24 °C

ಕ್ಷಮೆ ಯಾಚಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕುಂಬಾರ ಸಮುದಾಯ ಕುರಿತು ವ್ಯಂಗ್ಯವಾಗಿ ಹೇಳಿಕೆ ನೀಡಿರುವ ಶಾಸಕ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು' ಎಂದು ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ನಾಗೇಶ್ ಆಗ್ರಹಿಸಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಡಿ.ಕೆ. ಶಿವಕುಮಾರ್ ಅವರು ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಯಾವುದೇ ಬೇಸರವಿಲ್ಲ. `ನಾನು ಎತ್ತಿಹಾಕಿದರೆ ಛಿದ್ರವಾಗುವ ಕುಂಬಾರರ ಮಡಿಕೆಯಲ್ಲ, ಗಟ್ಟಿಯಾದ ಹಿತ್ತಾಳೆ ಪಾತ್ರೆ' ಎಂದು ಹೇಳಿಕೆ ನೀಡಿ ಕುಂಬಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ' ಎಂದರು.ಈ ಕುರಿತು ಅವರು ಶೀಘ್ರ ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಅವರ ಮನೆ ಹಾಗೂ ಕೆಪಿಸಿಸಿ ಕಚೇರಿ ಮುಂದೆ  ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.   

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.