ಬುಧವಾರ, ನವೆಂಬರ್ 20, 2019
25 °C

ಕ್ಷುಲ್ಲಕ ಕಾರಣಕ್ಕೆ ಜಗಳ: ಅಂಗಡಿ ಧ್ವಂಸ

Published:
Updated:

ರಟ್ಟೀಹಳ್ಳಿ: ಸ್ಥಳೀಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಿ ಅಂತಿಮ ಪಂದ್ಯದ ಹಂತದಲ್ಲಿ ಬುಧವಾರ ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಗುಂಪು ಘರ್ಷಣೆಯಿಂದ ಇಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.ಇಲ್ಲಿಯ ಹಳೆ ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ಕಟಿಂಗ್ ಶಾಪ್ ಮತ್ತು ಅಡಿಕೆ ಅಂಗಡಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದರು. ಭಯಭೀತರಾದ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡಿದರು. ಹೀಗಾಗಿ ಅಘೋಷಿತ ಬಂದ್ ವಾತಾವರಣ ಕಂಡು ಬಂದಿತು.ಸಿಪಿಐ ವಿಜಯ ಮುರಗುಡಿ ಸ್ಥಳಕ್ಕೆ ಭೇಟಿ ನೀಡಿ,  ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಘಟನೆಯ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಯಾದರೂ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಪ್ರತಿಕ್ರಿಯಿಸಿ (+)