ಸೋಮವಾರ, ಮೇ 23, 2022
24 °C

ಕ್ಷುಲ್ಲಕ ಕಾರಣಕ್ಕೆ ಜಗಳ: ಗುಂಡು ಹಾರಿಸಿದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ಜಗಳ ನಡೆದು ಅವರಲ್ಲಿ ಒಂದು ಗುಂಪಿನ ಯುವಕನೊಬ್ಬ ಎದುರಾಳಿ ಗುಂಪಿನವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಘಟನೆ ಚಿಕ್ಕಪೇಟೆಯ ಆಸ್ಪತ್ರೆ ರಸ್ತೆ ಸಮೀಪ ಭಾನುವಾರ ರಾತ್ರಿ ನಡೆದಿದೆ.ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಹೆಸರು ಮತ್ತು ಗುರುತು ಪತ್ತೆಯಾಗಿಲ್ಲ ಎಂದು ಚಿಕ್ಕಪೇಟೆ ಪೊಲೀಸರು ತಿಳಿಸಿದ್ದಾರೆ.ರಾತ್ರಿ 12.30ರ ಸುಮಾರಿಗೆ ಆಸ್ಪತ್ರೆ ರಸ್ತೆಯಲ್ಲಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆಯಿತು. ಈ ವಿಷಯವಾಗಿ ಬೈಕ್ ಸವಾರರು ಮತ್ತು ಕಾರಿನಲ್ಲಿದ್ದ ಯುವಕರ ನಡುವೆ ಮಾತಿನ ಚಕಮಕಿ ನಡೆದು ಜಗಳವಾಯಿತು. ಈ ವೇಳೆ ಕಾರಿನಲ್ಲಿದ್ದ ಯುವಕ ಎದುರಾಳಿಗಳ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ನಾಲ್ಕು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ಕೇಂದ್ರ ವಿಭಾಗದ ಡಿಸಿಪಿ ನಂಜುಂಡಸ್ವಾಮಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.