ಬುಧವಾರ, ನವೆಂಬರ್ 13, 2019
28 °C

`ಕ್ಷೇತ್ರದ ಅಭಿವೃದ್ದಿಗೆ ಕೆಜೆಪಿ ಬೆಂಬಲಿಸಿ'

Published:
Updated:

ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗಾಗಿ ಕ್ಷೇತ್ರದ ಜನತೆ ಕೆಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಪಕ್ಷದ ಅಭ್ಯರ್ಥಿ ವೆಂಕಟರಡ್ಡಿ ಮುದ್ನಾಳ ಮನವಿ ಮಾಡಿದರು.ಶುಕ್ರವಾರ ಕಡೇಚೂರ, ಬದ್ದೇಪಲ್ಲಿ ದುಪ್ಪಲ್ಲಿ, ಚಂದಾಪೂರ, ಬೊಂಬರಾಲ ದೊಡ್ಡಿ ಗ್ರಾಮಗಳಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ರಾಜ್ಯದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡಿರುವುದೇ ಕೆಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು. ಕ್ಷೇತ್ರದ ಶಾಸಕ ಬಾಬುರಾವ ಚಿಂಚನಸೂರ, ಅಭಿವೃದ್ಧಿಗಾಗಿ ಬಂದ ಹಣವನ್ನು ಎತ್ತಿ ಹಾಕಿದ್ದಾರೆ. ಮತದಾರರಿಗೆ ಮೋಸ ಮಾಡಿದ್ದಾರೆ. ಅವರ ಅಕ್ರಮಗಳಿಗೆ ಕಡಿವಾಣ ಹಾಕಲು ನಾನು ಪ್ರತಿಯೊಂದು ಹಂತದಲ್ಲಿ ಜನರ ಸಹಕಾರದಿಂದ ಹೋರಾಟ ಮಾಡಿದ್ದೇನೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ಮಮ್ತೋಜ್ ಅಲಿಖಾನ್ ಅವರು ವಿಶೇಷವಾಗಿ ಗಡಿಭಾಗದ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಹಲವಾರು ಯೋಜನೆಗಳನ್ನು ರೂಪಿಸಿ, ಅಗತ್ಯ ಅನುದಾನ ಒದಗಿಸಿದ್ದಾರೆ. ಇದರಿಂದ ಅಪಾರ ಬದಲಾವಣೆ ಕಾಣಲು ಸಾಧ್ಯವಾಗಿದೆ ಎಂದರು. ಕಳೆದ 5 ವರ್ಷಗಳಲ್ಲಿ ನಾನು ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಸಮಸ್ಯೆಗಳಿಗೆ ಹಗಲಿರುಳು ಶ್ರಮಿಸಿದ್ದೇನೆ. ಮುಂದೆಯೂ ನಿಮಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗಾಗಿ ಶ್ರಮಿಸಲು ಬದ್ಧನಾಗಿದ್ದೆೀನೆ. ಈ ಬಾರಿ ಚುನಾವಣೆಯಲ್ಲಿ ಕೆಜೆಪಿಗೆ ಬೆಂಬಲಿಸಬೇಕು ಎಂದು ಹೇಳಿದರು.ಕೆಜೆಪಿ ಮುಖಂಡ ಶರಣಗೌಡ ಬಾಡಿಯಾಳ ಮಾತನಾಡಿ, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು, ಮತಕ್ಷೇತ್ರದ ಅಭಿವೃದ್ಧಿಗಾಗಿ ಕೋಟ್ಯಂತರ ಹಣ ಬಿಡುಗಡೆ ಮಾಡಿದರು. ಶಾಸಕ ಚಿಂಚನಸೂರ ಹಣ ಲೂಟಿ ಮಾಡುವುದರಲ್ಲಿಯೇ ತಮ್ಮ ಕಾಲ ಕಳೆದರು ಎಂದು ದೂರಿದರು.ದುಪ್ಪಲ್ಲಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಮುಖಂಡ ಮಲ್ಲನಗೌಡ ಪಾಟೀಲ್ ತಮ್ಮ ಬೆಂಬಲಿಗರೊಂದಿಗೆ ಪಕ್ಷ ತೊರೆದು ಕೆಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಡೇಚೂರ ಗ್ರಾಮದಲ್ಲಿ ಮಹಾದೇವಪ್ಪ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಕೆಜೆಪಿ ಸೇರ್ಪಡೆಯಾದರು.ಮುಖಂಡರಾದ ಪ್ರಕಾಶರಡ್ಡಿ ಪಾಟೀಲ್ ಸೈದಾಪೂರ, ದೇವಿಂದ್ರಪ್ಪ ಬಾಡಿಯಾಳ, ಮಲ್ಲಣಗೌಡ ಹತ್ತಿಕುಣಿ, ಸೂಗೂರಪ್ಪ ಸಾಹುಕಾರ ಕಡೆಚೂರ, ಸೋಮನಾಥ ಹೂಗಾರ್, ಶ್ರೀಧರ ಘಂಟಿ, ಡಾ. ಶರಣರಡ್ಡಿ ಕೋಡ್ಲಾ, ವಿರುಪಣ್ಣಗೌಡ ಬೆಳಗುಂದಿ, ಶಿವರಾಜಪ್ಪಗೌಡ ಬೊಮರಾಲದೊಡ್ಡಿ ಸೇರಿದಂತೆ ಮುಂತಾದವರು ಇದ್ದರು.

ಪ್ರತಿಕ್ರಿಯಿಸಿ (+)