ಶುಕ್ರವಾರ, ಜೂಲೈ 10, 2020
28 °C

ಕ್ಷೇತ್ರ ಅಭಿವೃದ್ಧಿಗೆ ರೂ 1 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ಶಿವಾಜಿ ಮಹಾರಾಜರು ಅಪ್ರತಿಮ ದೇಶಭಕ್ತರಾಗಿದ್ದರು. ಅವರ ತಂದೆ ಸಮಾಧಿ ಸ್ಥಳದಲ್ಲಿ ಪುಣ್ಯತಿಥಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದು ಶಿವಮೊಗ್ಗ ಆದಿಚಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.ಭಾನುವಾರ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದ ಷಹಾಜಿ ರಾಜೇ ಭೋಂಸ್ಲೆ ಅವರ 347ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ್ಙ 1 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈಗ ಪ್ರಥಮ ಕಂತಾಗಿ ರೂ 33 ಲಕ್ಷ ಅನುದಾನ ಬಿಡುಗಡೆಯಾಗಿದೆ. ಉಳಿದ ಅನುದಾನವನ್ನು ಬೇಗ ಬಿಡುಗಡೆ ಮಾಡಿದರೆ ಸಮುದಾಯ ಭವನದ ನಿರ್ಮಾಣ ಕಾರ್ಯಕ್ಕೆ ಸಹಾಯಕವಾಗುತ್ತದೆ.ಸಮಾಜದ ಅಭಿವೃದ್ಧಿಗೆ ಸಮಾಜದ ಬಾಂಧವರು ಮೊದಲು ಸಂಘಟಿತರಾಗಬೇಕು. ನಾವೆಲ್ಲರೂ ಒಂದೇ ಭಾವನೆ  ಮೂಡಬೇಕು. ಇಂದು ಪ್ರಾಮಾಣಿಕತೆ ಕೊರತೆಯಿಂದ ದೇಶದ ಪ್ರಗತಿ ಸಾಧ್ಯವಾಗಿಲ್ಲ. ನಾವು ಇಂದು ಅರ್ಥ, ಕಾಮವನ್ನು ಮಾತ್ರ ಸ್ವೀಕರಿಸಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಧಿ ಸ್ಥಳದ ಅಭಿವೃದ್ಧಿಗೆ ಈ ಸರ್ಕಾರ ್ಙ 1 ಕೋಟಿ ಬಿಡುಗಡೆ ಮಾಡಿ ್ಙ 33 ಲಕ್ಷವನ್ನು ಪ್ರಥಮ ಕಂತಾಗಿ ನೀಡಿದೆ ಎಂದರು.ಗೋಸಾಯಿ ಸಂಸ್ಥಾನ ಮಠದ ಸುರೇಶ್ವರಾನಂದ ಸ್ವಾಮೀಜಿ, ಐರಣಿ ಹೊಳೆ ಮಠದ ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗ ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಹಾಗೂ ಹುಬ್ಬಳ್ಳಿ ಸಿದ್ಧಾರೂಡ ಮಠದ ವಾಸುದೇವಾನಂದ ಸ್ವಾಮೀಜಿ ನೇತೃತ್ವ ವಹಿಸಿದ್ದರು.ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶವಂತರಾವ್ ಜಾಧವ್, ಭದ್ರಾವತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಶಿವಾಜಿರಾವ್ ಶಿಂಧೆ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಮಾಜಿ ಜಿ.ಪಂ. ಸದಸ್ಯ ಹೊದಿಗೆರೆ ರಮೇಶ್, ಎಂ.ಎಸ್. ಜಾಧವ್, ಗ್ರಾ.ಪಂ. ಅಧ್ಯಕ್ಷ ಗಿರೀಶ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.