ಮಂಗಳವಾರ, ಮೇ 18, 2021
30 °C

ಖಮರುಲ್ ಹೇಳಿಕೆಗೆ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ದುರ್ಬಳಕೆ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ನೀಡಿರುವ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಕ್ಫ್ ಖಾತೆ ಸಚಿವ ಖಮರುಲ್ ಇಸ್ಲಾಂ ನೀಡಿದ ಹೇಳಿಕೆಗೆ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ತಮ್ಮ ನೇತೃತ್ವದ ಆಯೋಗ ಹಿಂದಿನ ಮುಖ್ಯಮಂತ್ರಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಿಗೆ ವರದಿ ನೀಡಿತ್ತು. ಇದು ಸಚಿವ ಸಂಪುಟದಲ್ಲಿ ಅಂಗೀಕಾರವಾಗಿದೆ. ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿದೆ. ವರದಿ ಪ್ರಕಾರ ಕ್ರಮ ಕೈಗೊಳ್ಳಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಇದನ್ನು ತಿಳಿಯದ ಖಮರುಲ್ ಅವರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.